ದ.ಕ. ಜಿಲ್ಲೆಯ ವಿಶೇಷ ನೋಡಲ್ ಅಧಿಕಾರಿಯಾಗಿ ವಿ. ಪೊನ್ನುರಾಜ್ ನೇಮಕ

ಬೆಂಗಳೂರು: ದ.ಕ. ಜಿಲ್ಲಾಧಿಕಾರಿಯಾಗಿ ಉತ್ತಮ ಹೆಸರು ಗಳಿಸಿದ್ದ ವಿ. ಪೊನ್ನುರಾಜ್ ಮತ್ತೊಮ್ಮೆ ದ.ಕ. ಜಿಲ್ಲೆಯ ವಿಶೇಷ ನೋಡಲ್ ಅಧಿಕಾರಿಯಾಗಿ ಆಗಮಿಸಲಿದ್ದಾರೆ. ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿಶೇಷ ಕಾರ್ಯದರ್ಶಿ, ಐಎಎಸ್ ಅಧಿಕಾರಿ ವಿ. ಪೊನ್ನುರಾಜ್ ಅವರನ್ನು ನೇಮಕ ಮಾಡುವಂತೆ ಕೋರಿಕೆ ಸಲ್ಲಿಸಲಾಗಿತ್ತು. ಇದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ವಿ. ಪೊನ್ನುರಾಜ್ ಅವರು ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಈ ಸಂದರ್ಭ ಇವರು ಮಾಡಿರುವ ಕೆಲಸಗಳಿಂದಾಗಿ ಇಂದಿಗೂ ಜನರು ಗುರುತಿಸುತ್ತಿದ್ದಾರೆ.

ವೆಂಟಿಲೇಟರ್ ಅಳವಡಿಕೆ:
ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಇನ್ನೊಂದು ವಾರದಲ್ಲಿ 100 ವೆಂಟಿಲೇಟರ್‌ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಈಗಾಗಲೇ ವೆನ್ಲಾಕ್ ಆಸ್ಪತ್ರೆಯಲ್ಲಿ 32 ವೆಂಟಿಲೇಟರ್‌ಗಳಿವೆ. ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ಕಟ್ಟಡದಲ್ಲಿ ವೆಂಟಿಲೇಟರ್ ಅಳವಡಿಸಲಾಗುವುದು ಎಂದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.