ಸಜಿಪನಡು ಗ್ರಾಮದಲ್ಲಿ 10 ತಿಂಗಳ ಮಗುವಿಗೆ ಕೊರೋನಾ ದೃಢ! ಸಜಿಪನಡು ಗ್ರಾಮದಲ್ಲಿ ಕ್ವಾರಂಟೈನ್ ಗೆ ಆದೇಶ ಜಾರಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದಲ್ಲಿ ೧೦ ತಿಂಗಳ ಮಗುವಿಗೆ ಕೋವಿಡ್ ೧೯ ಪೊಸಿಟಿಯೋ ಎಂದು ದೃಢ ಪಟ್ಟಿದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

ಜ್ವರದಿಂದ ಬಳುತ್ತಿದ್ದ ೧೦ ತಿಂಗಳ ಮಗುವನ್ನು ಮಾ.೨೩ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲ್ಯಾಬ್ ಟೆಸ್ಟಿಂಗ್ ಶಿಷ್ಟಾಚಾರದ ಪ್ರಕಾರ ರಾಜ್ಯ ತಂಡದಿಂದ ಅನುಮತಿ ಪಡೆದು ಮಾ.೨೪ರಂದು ಮಗುವಿನ ಗಂಟಲು ಸ್ರಾವ ಮಾದರಿಯನ್ನು ತಪಾಸಣೆಗಾಗಿ ಕಳುಹಿಸಲಾಗಿತ್ತು. ಮಾ.೨೬ರಂದು ಬಂದ ವರದಿಯಲ್ಲಿ ಕೋವಿಡ್ ೧೯ ದೃಢಪಟ್ಟಿರುತ್ತದೆ.

ಮುಂಜಾಗ್ರತಾ ಕ್ರಮವಾಗಿ ಸಜಿಪನಡು ಇಡೀ ಗ್ರಾಮದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಯಾವುದೇ ವ್ಯಕ್ತಿಗಳು ಸಜಿಪನಡು ಗ್ರಾಮದಿಂದ ಹೊರಗೆ ಹೋಗುವುದು ಹಾಗೂ ಗ್ರಾಮದ ಒಳಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.