ಮಾ.28ರಂದು ದ.ಕ ಜಿಲ್ಲೆ ವಾಣಿಜ್ಯ ವ್ಯವಹಾರ ಸಂಪೂರ್ಣ ಬಂದ್

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ೭ ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂದಿಸಿ, ಎಲ್ಲಾ ಚಟುವಟಿಕೆ, ವಾಣಿಜ್ಯ, ವ್ಯವಹಾರಗಳನ್ನು ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾ.೨೭ರಂದು ನಡೆದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 7 ಪ್ರಕರಣಗಳು ವರದಿಯಾಗಿವೆ. ನೆರೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕರೋನಾ ಪಾಸಿಟಿವ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿವೆ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂದಿಸದಿದ್ದರೆ, ಮುಂದಿನ ದಿನಗಳು ಇನ್ನಷ್ಟು ಅಪಾಯಕಾರಿಯಾಗಿವೆ. ಜನರ ಉತ್ತಮ ಭವಿಷ್ಯಕ್ಕಾಗಿ ಕೈಗೊಳ್ಳುವ ಈ ನಿರ್ಧಾರವನ್ನು ಎಲ್ಲರೂ ಬೆಂಬಲಿಸಬೇಕು. ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರವನ್ನು ಅನಿವಾರ್ಯವಾಗಿ ತೆಗೆದುಕೊಳ್ಳಬೇಕಿದೆ. ಪ್ರತಿಯೊಬ್ಬರೂ ಮನೆಯೊಳಗೆ ಕೂತು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಚಟುವಟಿಕೆ, ವಾಣಿಜ್ಯ ವ್ಯವಹಾರಗಳನ್ನು, ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಸಭೆಯಲ್ಲಿ ಸಂಸದರು, ಜಿಲ್ಲೆಯ ಶಾಸಕರ, ಜಿ.ಪಂ ಅಧ್ಯಕ್ಷರು, ಮೇಯರ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.