Breaking News

ಕೊರೋನಾ 3ನೇ ಹಂತಕ್ಕೆ ತಲುಪದಂತೆ ಕ್ರಮಕೈಗೊಳ್ಳಲು ಆಗ್ರಹ: ಸಿಎಂ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷ ಮುಖಂಡರ ಸಭೆ

Puttur_Advt_NewsUnder_1
Puttur_Advt_NewsUnder_1
ಬೆಂಗಳೂರು: ಕೊರೋನಾ ವೈರಸ್ ಮೂರನೇ ಹಂತ ತಲುಪದಂತೆ ಹಾಗೂ ಗ್ರಾಮೀಣ ಭಾಗಕ್ಕೆ ಹರಡಂತೆ ನೋಡಿಕೊಳ್ಳಬೇಕು ಎಂದು ಪ್ರತಿಪಕ್ಷ ಮುಖಂಡರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. 
ರಾಜ್ಯದಲ್ಲಿ ಹಬ್ಬುತ್ತಿರುವ ಕೊರೊನಾ ಸೋಂಕು ಹಿನ್ನಲೆಯಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳು ಹಾಗೂ ಲಾಕ್ ಡೌನ್ ನಿಂದ ಎದುರಾಗಿರುವ ಪರಿಸ್ಥಿತಿ, ಎದುರಿಸುವ ವಿಧಾನಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಯಿತು.
ಸಭೆಯಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ. ಕುಮಾರ ಸ್ವಾಮಿ ಮತ್ತಿತರರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. 
ವಿಧಾನಸೌಧದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೊರೊನಾದಿಂದ ಜನ ಜೀವನದ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ಸೋಂಕು ಹರಡದಂತೆ ತಡೆಯಲು ರಾಜ್ಯ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಮಾರ್ಚ್ ೧೩ ರಿಂದ ನಿರಂತರ ಸಭೆಗಳನ್ನು ನಡೆಸಿ ಪರಿಸ್ಥಿತಿ ಅವಲೋಕಿಸುತ್ತಿದೆ. ಕೊರೊನಾ ತಡೆ ನಿಟ್ಟಿನಲ್ಲಿ ಸರ್ಕಾರ ಟಾಸ್ಕ್ ಫೋರ್ಸ್ ರಚಿಸಿದ್ದು. ಜನ ಜೀವನಕ್ಕೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.
ವಿದೇಶದಿಂದ ಬಂದವರಿಗೆ ಆರೋಗ್ಯ ತಪಾಸಣೆ ಮಾಡಿ
ವಿದೇಶದಿಂದ ಬಂದವರ ಆರೋಗ್ಯ ತಪಾಸಣೆ ಸರಿಯಾಗಿ ಮಾಡುತ್ತಿಲ್ಲ. ವಿದೇಶದಿಂದ ಬಂದಿರುವ ಇನ್ನೂ 4500 ಮಂದಿಯನ್ನು ಕೂಡಲೇ ಪತ್ತೆ ಮಾಡಿ ದಿಗ್ಭಂಧನ ವಿಧಿಸಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ವಿದೇಶದಿಂದ ಬಂದವರನ್ನು ಸರಿಯಾಗಿ ತಪಾಸಣೆ ಮಾಡಿದ್ದರೆ ಸಮಸ್ಯೆ ತೀವ್ರವಾಗುತ್ತಿರಲಿಲ್ಲ. ನಮ್ಮ ತಪ್ಪಿನಿಂದ ಯಾವ ನ್ಯೂನತೆ ಆಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಮೂರನೇ ಹಂತಕ್ಕೆ ಕರ್ನಾಟಕ ಇನ್ನೂ ಹೋಗಿಲ್ಲ ಎಂದು ಸಚಿವರು ಹೇಳಿದ್ದಾರೆ. ಆದರೂ ಇನ್ನಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.