Home_Page_Advt
Home_Page_Advt
Home_Page_Advt
Home_Page_Advt

7ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್:‌ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ

Puttur_Advt_NewsUnder_1
Puttur_Advt_NewsUnder_1

ಕೊರೋನ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಬೇಕಿದ್ದ 7, 8 ಮತ್ತು 9ನೇ ತರಗತಿ ಹಾಗೂ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿಯ ಕೊನೆಯ ಪರೀಕ್ಷೆ ನಡೆಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಯಾವುದೇ ಪರೀಕ್ಷೆಗಳಿಲ್ಲದೆ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಉತ್ತೀರ್ಣ ಮಾಡಲು ನಿರ್ಧರಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಆದರೆ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, ಶೀಘ್ರದಲ್ಲಿ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಏಪ್ರಿಲ್ 14 ರಂದು ಲಾಕ್ ಡೌನ್ ಮುಗಿಯುತ್ತಿದ್ದಂತೆ ಎಸ್ಎಸ್ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ಸುರೇಶ ಕುಮಾರ ತಿಳಿಸಿದ್ದಾರೆ.

ಯಾವುದೇ ಪರೀಕ್ಷೆ, ಷರತ್ತುಗಳಿಲ್ಲದೆ 7ನೇ ತರಗತಿಯ ವಿದ್ಯಾರ್ಥಿಗಳು 8ನೇ ತರಗತಿಗೆ, 8ನೇ ತರಗತಿ ವಿದ್ಯಾರ್ಥಿಗಳು 9ನೇ ತರಗತಿಗೆ ಕಳುಹಿಸಲಾಗುವುದು. ಮುಂದಿನ ಶೈಕ್ಷಣಿಕ ಸಾಲಿನ ಆರಂಭಿಸುವುದಕ್ಕೆ ಮುಂಚಿತವಾಗಿ 7ನೇ ತರಗತಿಗೆ ಸಿದ್ಧಪಡಿಸಲಾಗಿರುವ ಪ್ರಶ್ನೆಪತ್ರಿಕೆಯನ್ನಿಟ್ಟು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವವ ಬಗ್ಗೆ ಚಿಂತನೆ ನಡೆಸಲಾಗುವುದು. ಆದರೆ ಸದ್ಯ 7 ಮತ್ತು 8ನೇ ತರಗತಿಗೆ ಯಾವುದೇ ಪರೀಕ್ಷೆಗಳು ಇರುವುದಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.

 

9ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ವರೆಗೆ ನಡೆದಿರುವ ತರಗತಿ ಪರೀಕ್ಷೆಗಳಾಗಿ ನಡೆದಿರುವ Formative(ರೂಪಣಾತ್ಮಕ) ಮತ್ತು summative (ಸಂಕಲನಾತ್ಮಕ) ಪರೀಕ್ಷೆಗಳ ಆಧಾರದ ಮೇಲೆ 10ನೇ ತರಗತಿಗೆ ಉತ್ತೀರ್ಣ ಮಾಡಲಾಗುವುದು. ಒಂದುವೇಳೆ ಈ ಎರಡು ಆಂತರಿಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರದಿದ್ದಲ್ಲಿ, ಅಂತಹ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನ ಅವಧಿಗೆ ಮುಂಚಿತವಾಗಿ ಮತ್ತೊಮ್ಮೆ ಪರೀಕ್ಷೆ ನಡೆಸಬೇಕು. ಇದಕ್ಕೆ ಅಗತ್ಯವಾಗಿರುವ ಕ್ರಮಗಳನ್ನು ಸಂಬಂಧಪಟ್ಟ ಶಾಲೆಗಳೇ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.

 

ಎಸೆಸೆಲ್ಸಿ ಪರೀಕ್ಷೆಯ ಬಗ್ಗೆ ಎಪ್ರಿಲ್ 14ರ ಬಳಿಕ ಪರಿಸ್ಥಿತಿಯ ಅವಲೋಕನ ನಡೆಸಿ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು. ಅದೇರೀತಿ ಬಾಕಿ ಉಳಿದಿರುವ ಪಿಯುಸಿ ಕೊನೆಯ ಪರೀಕ್ಷೆ(ಇಂಗ್ಲಿಷ್ ) ನಡೆಸುವ ಬಗ್ಗೆಯೂ ಎಪ್ರಿಲ್ 14ರ ಬಳಿಕ ತೀರ್ಮಾನಿಸಲಾಗುವುದು ಎಂದು ಸಚಿವರು ಸ್ಪಷಪಡಿಸಿದರು. ಈ ನಡುವೆ ಪರೀಕ್ಷೆ ಇಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಬೀದಿಗಿಳಿಯೂ ಪ್ರಯತ್ನ ಮಾಡಬಾರದು ಎಂದು ಶಿಕ್ಷಣ ಸಚಿವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.

 

 

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.