Home_Page_Advt
Home_Page_Advt
Home_Page_Advt
Home_Page_Advt

ಲಾಕ್‌ಡೌನ್ ಉಲ್ಲಂಘನೆ – ಪುತ್ತೂರಿನಲ್ಲಿ 39 ವಾಹನಗಳಿಗೆ ದಂಡ ವಿಧಿಸಿದ ಪೊಲೀಸರು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೋನಾ ವೈರಸ್ ಸೋಂಕು ಹರಡದಂತೆ ಲಾಕ್‌ಡೌನ್ ಇದ್ದರೂ ಅನಗತ್ಯ ವಾಹನ ಸಂಚಾರಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆ ಮತ್ತು ಸಂಚಾರ ಪೊಲೀಸ್ ಠಾಣೆಯಲ್ಲಿ 14 ಪ್ರಕರಣ ದಾಖಲಾದರೆ, ಮಹಿಳಾ ಪೊಲೀಸ್ ಠಾಣೆಯಲ್ಲಿ ಬರೋಬ್ಬರಿ 25 ಕಾರುಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಮೂಲಕ ಎ.6ರಂದು ಒಟ್ಟು 39 ಪ್ರಕರಣಗಳು ದಾಖಲಾಗಿದೆ.


40ಕ್ಕೂ ಅಧಿಕ ವಾಹನಗಳನ್ನು ವಶಕ್ಕೆ ಪಡೆದಿದ್ದರೂ ಕೆಲವೊಂದು ವಾಹನ ಮಾಲಕರು ಅಗತ್ಯ ದಾಖಲೆಗಳನ್ನು ತೋರಿಸಿದ ಬಳಿಕ ಅವರ ವಾಹನಗಳನ್ನು ಬಿಡಲಾಗಿತ್ತು. ಈ ನಡುವೆ ಅನೇಕ ದ್ವಿಚಕ್ರ ವಾಹನಗಳನ್ನು ಹಿಂದಕ್ಕೆ ಕಳುಹಿಸಲಾಗಿತ್ತು. ಆದರೂ ಲಾಕ್‌ಡೌನ್ ಉಲ್ಲಂಘಿಸಿ ಅನಗತ್ಯ ತಿರುಗಾಡುತ್ತಿದ್ದ ವಾಹನಗಳ ವಿರುದ್ಧ ಪೊಲೀಸರು ದಂಡ ವಿಧಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 7 ಕಾರು, 3 ದ್ವಿಚಕ್ರ ವಾಹನಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅದೇ ರೀತಿ ಸಂಚಾರ ಪೊಲೀಸ್ ಠಾಣೆಯಲ್ಲಿ 2 ಕಾರು ಮತ್ತು 2 ದ್ವಿಚಕ್ರ ವಾಹನಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಬರೋಬ್ಬರಿ 25 ಕಾರುಗಳ ವಿರುದ್ಧ ಪ್ರಕರಣ ದಾಖಲು ಮಾಡಿದ್ದು, ವಾಹನ ಸವಾರರು ದಂಡ ಪಾವತಿಸಿದ ಬಳಿಕ ವಾಹನಗಳನ್ನು ಬಿಡುಗಡೆಗೊಳಿಸಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.