Home_Page_Advt
Home_Page_Advt
Home_Page_Advt

ನೆಲ್ಯಾಡಿ: ಕರ್ತವ್ಯನಿರತ ಮೆಸ್ಕಾಂ ಸಿಬ್ಬಂದಿಗೆ ವ್ಯಕ್ತಿಯಿಂದ ಹಲ್ಲೆ

Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ನೆಲ್ಯಾಡಿ ಮೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಇಚ್ಲಂಪ್ಪಾಡಿಯಲ್ಲಿ ಕರ್ತವ್ಯದಲ್ಲಿದ್ದ ಪವರ್ ಮ್ಯಾನ್ ಒರ್ವರಿಗೆ ಸ್ಥಳೀಯ ವ್ಯಕ್ತಿಯೋರ್ವನು ಹಲ್ಲೆ ಮಾಡಿದ ಘಟನೆ ವರದಿಯಾಗಿದೆ.

ಮೇ.14ರಂದು ಇಚ್ಲಂಪ್ಪಾಡಿಯಲ್ಲಿ ನೆಲ್ಯಾಡಿ ಮೆಸ್ಕಾಂನ ಪವರ್ ಮ್ಯಾನ್ ಗಳಾದ ಶರಣಪ್ಪ ಚಲವಾದಿ ಮತ್ತು ಆನಂದ್ ಲಂಬಾಣಿ ಎಂಬವರು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಮಯದಲ್ಲಿ ಇಚ್ಲಂಪ್ಪಾಡಿಯ ಸುಳ್ಯಮಜಲು ಎಂಬಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸ್ಥಳೀಯರಾದ ಶಿಬು ವರ್ಗೀಸ್ ಎಂಬವರು ಮೆಸ್ಕಾಂ ಪವರ್ ಮ್ಯಾನ್ ಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಗಾಯಾಳು ಪವರ್ ಮ್ಯಾನ್ ಶರಣಪ್ಪ ಚಲವಾದಿಯವರು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಆದರೆ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು‌. ಇದೀಗ ಮತ್ತೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.