ಲಾಕ್‌ಡೌನ್ ಮಧ್ಯೆಯೇ 4014 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಮತ್ತು ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4014 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
444 ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ (ಪುರುಷರು) (ಕಲ್ಯಾಣ -ಕರ್ನಾಟಕ), 1005 ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್(ಪುರುಷರು),558ನಾಗರಿಕ ಪೊಲೀಸ್ (ಪುರುಷ/ಮಹಿಳಾ)(ಕಲ್ಯಾಣ ಕರ್ನಾಟಕ) ಮತ್ತು 2007 ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ (ಪುರುಷ/ಮಹಿಳಾ) ಸೇರಿದಂತೆ ಒಟ್ಟು 4014 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆ ಭರ್ತಿ ಮಾಡಲು ಉದ್ದೇಶಿಸಲಾಗಿದೆ.

ಮೇ 20 ರಿಂದ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಆರಂಭಗೊಂಡಿದ್ದು, ಜೂನ್ ೨೨ ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಜೂ. ೨೫ ಅರ್ಜಿ ಶುಲ್ಕ ಪಾವತಿಸಲು ಕಡೆಯ ದಿನವಾಗಿರುತ್ತದೆ.

ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ಸಂಪರ್ಕಿಸಬಹುದಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.