HomePage_Banner
HomePage_Banner
HomePage_Banner

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ದೈನಂದಿನ ಮಾದರಿಯಲ್ಲಿ ಆನ್ ಲೈನ್ ತರಗತಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪ್ರಥಮ ಪಿಯುಸಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ, 10ನೇ ತರಗತಿಗೆ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ, ಪ್ರಸ್ತುತ ೧೦ನೇ ತರಗತಿಗೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ೪ ತರಗತಿಗಳಲ್ಲಿ ಸ್ಟುಡಿಯೋವನ್ನು ನಿರ್ಮಿಸಿ ಏಕಕಾಲದಲ್ಲಿ ಆನ್‌ಲೈನ್ ತರಗತಿಗಳನ್ನು ನಡೆಸುತ್ತಿರುವ ರಾಜ್ಯದಲ್ಲೇ ಪ್ರಥಮ ಸಂಸ್ಥೆ ಎಂಬ ಹೆಗ್ಗಳಿಕೆ ಪುತ್ತೂರಿನ ಪ್ರಗತಿ ಸ್ಟಡಿ ಸೆಂಟರ್‌ಗೆ ಸಲ್ಲುತ್ತದೆ. ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಭರವಸೆಯ ಬೆಳಕಾಗಿ ಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳ ಕೈಹಿಡಿದು ಮುನ್ನಡೆಸುತ್ತಿರುವುದು ಶ್ಲಾಘನೀಯ.

ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವು ಈಗಾಗಲೇ ಪ್ರಕಟವಾಗಿದ್ದು, ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ತಯಾರಾಗಲು ವಿಜ್ಞಾನ, ವಾಣಿಜ್ಯ ವಿಷಯಗಳ ಬೋಧನೆಗೆ ಕಷ್ಟವಾಗಿದ್ದು, ವಿದ್ಯಾರ್ಥಿಗಳ ಕಲಿಕೆಯ ಮೇಲೆ ಹೊಡೆತ ಬೀಳದಂತೆ ನೋಡಿಕೊಳ್ಳಲು ಹಾಗೆಯೇ ವಿದ್ಯಾರ್ಥಿಗಳ ಆರೋಗ್ಯ, ಸಾಮಾಜಿಕ ಅಂತರ, ಪರಿವಾರದ ರಕ್ಷಣೆಗೆ ಆದ್ಯತೆ ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಅನುತ್ತೀರ್ಣ ಹೊಂದಿರುವ ವಿದ್ಯಾರ್ಥಿಗಳಿಗಾಗಿಯೇ ಮೇ ೧೫, ಶುಕ್ರವಾರದಿಂದ ಆನ್‌ಲೈನ್ ಮೂಲಕ ವಿಷಯ ಬೋಧನೆಯನ್ನು ನಡೆಸುತ್ತಾ ಬಂದಿದೆ. ಪೂರಕ ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳ ಮೊಗದಲ್ಲಿ ಹೊಸ ಮಂದಹಾಸ ಮೂಡಿಸುತ್ತಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸುವ ಮೊದಲೇ ವಿದ್ಯಾರ್ಥಿಗಳ ಭವಿಷ್ಯದ ಪರ ಚಿಂತನೆ ನಡೆಸಿ, ಉಚಿತವಾಗಿ ಎಪ್ರಿಲ್ 15ರಿಂದ ಆನ್‌ಲೈನ್ ಮೂಲಕ ವಿಷಯವನ್ನು ಬೋಧಿಸುತ್ತಾ ಬಂದಿದ್ದು, ಸ್ಥಳೀಯ ಹಾಗೂ ಹೊರ ಊರಿನ ಸುಮಾರು ೬೪೩ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೀಕ್ಷಿಸಿದ್ದಾರೆ. ಅಲ್ಲದೇ ಪುತ್ತೂರಿನ ಮಾನ್ಯ ಶಾಸಕರಾದ ಸಂಜೀವ ಮಠಂದೂರುರವರು ವಿದ್ಯಾರ್ಥಿಗಳೊಂದಿಗೆ ನೇರ ಸಂವಾದವನ್ನು ನಡೆಸುವ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿರುತ್ತಾರೆ. ಕನ್ನಡ ಕೋಗಿಲೆ ಖ್ಯಾತಿಯ ಗಾಯಕಿ ಪುತ್ತೂರಿನ ಅಖಿಲಾ ಪಜಿಮಣ್ಣುರವರು ಮಕ್ಕಳೊಂದಿಗೆ ತಮ್ಮ 10ನೇ ತರಗತಿಯ ಶೈಕ್ಷಣಿಕ ಪರೀಕ್ಷಾ ಅನುಭವಗಳನ್ನು ಹಂಚಿಕೊಂಡಿದ್ದರು.

ಎಸ್.ಎಸ್.ಎಲ್.ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಗೊಂಡಿದ್ದು, ವಿದ್ಯಾರ್ಥಿಗಳಿಗೆ ಮೇ 21, ಗುರುವಾರದಿಂದ 6 ವಿಷಯಗಳಲ್ಲೂ ಪುನರ್ ಮನನ ತರಗತಿ ಆನ್‌ಲೈನ್ ಮೂಲಕವೇ ಬೋಧಿಸಲಾಗುತ್ತಿದೆ. ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ತರಗತಿಯ ಫಲದಾಯಕವನ್ನು ಪಡೆದುಕೊಳ್ಳುತ್ತಿದ್ದಾರೆ. ಮಾತ್ರವಲ್ಲದೇ 9ರಿಂದ 10ನೇ ತರಗತಿಗೆ ತೇರ್ಗಡೆ ಹೊಂದಿರುವ ಹಾಗೂ ಪ್ರಥಮ ಪಿಯುಸಿ ತೇರ್ಗಡೆಗೊಂಡು ದ್ವಿತೀಯ ಪಿಯುಸಿಗೆ ಕಾಲಿಟ್ಟ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಸೇತುಬಂಧ(ಬ್ರಿಡ್ಜ್ ಕೋರ್ಸ್)ತರಗತಿಗಳನ್ನು ಕೂಡ ನುರಿತ ಉಪನ್ಯಾಸಕರಿಂದ ನಡೆಸಲಾಗುತ್ತಿದೆ.

ವಿದ್ಯಾರ್ಥಿಗಳ ಉತ್ತಮ ವಿದ್ಯಾರ್ಜನೆಗೆ ಆದ್ಯತೆ ನೀಡುವ ಹಾಗೂ ವಿದ್ಯಾಭ್ಯಾಸದ ಜೊತೆಗೆ ನಿಮ್ಮ ಸುರಕ್ಷತೆ ನಮ್ಮ ಮೊದಲ ಆದ್ಯತೆ ಎಂಬ ಮುನ್ನುಡಿಯೊಂದಿಗೆ ಹೊಸ ಕಾರ್ಯಕ್ಕೆ ಅಣಿಯಾಗಿದೆ.

ಹೆಚ್ಚಿನ ಮಾಹಿತಿಗಾಗಿ +919900109490 ಅಥವಾ +919480106274 ಸಂಪರ್ಕಿಸಬೇಕಾಗಿ ಸಂಸ್ಥೆಯ ಪ್ರಾಂಶುಪಾಲರು ಹೇಮಲತಾ ಗೋಕುಲ್‌ನಾಥ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.