Home_Page_Advt
Home_Page_Advt
Home_Page_Advt

ಪುತ್ತೂರು ಉಪ ವಿಭಾಗ ಅಬಕಾರಿ ಉಪ ನಿರೀಕ್ಷಕ, ಸುಳ್ಯ ವಲಯ ಪ್ರಭಾರ ಅಬಕಾರಿ ನಿರೀಕ್ಷಕ ಮಹಾಲಿಂಗ ನಾಯ್ಕ ನರಿಮೊಗರು ಮೇ.30ರಂದು ಸೇವಾ ನಿವೃತ್ತಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ಉಪ ವಿಭಾಗ ಅಬಕಾರಿ ಉಪ ಅಧೀಕ್ಷಕರ ಕಛೇರಿಯಲ್ಲಿ ಸುಮಾರು 8 ವರ್ಷಗಳಿಂದ ಅಬಕಾರಿ ಉಪ ನಿರೀಕ್ಷಕರಾಗಿ ಮತ್ತು 3 ವರ್ಷಗಳಿಂದ ಸುಳ್ಯ ವಲಯದ ಪ್ರಭಾರ ಅಬಕಾರಿ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಮಹಾಲಿಂಗ ನಾಯ್ಕ ನರಿಮೊಗರು ಅವರು ಮೇ.30ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.
ಮಹಾಲಿಂಗ ನಾಯ್ಕರು ೧೯೮೫ನೇ ಇಸವಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರ್ಸಿಯಲ್ಲಿ ಅಬಕಾರಿ ಇಲಾಖೆಯಲ್ಲಿ ಕರ್ತವ್ಯಕ್ಕೆ ಸೇರಿದ್ದರು. ಬಳಿಕ ಮಂಗಳೂರು ಸಿಟಿ ರೇಂಜ್, ಮಂಗಳೂರು ದಕ್ಷಿಣ ವಲಯ, ಪುತ್ತೂರು ವಲಯ, ಸುಳ್ಯ ವಲಯ, ಬೆಳಗಾಂ ಜಿಲ್ಲೆಯ ರಾಯಭಾಗ್ ವಲಯ, ಉಡುಪಿ ವಲಯ ಮತ್ತು ಪುತ್ತೂರು ಉಪ ವಿಭಾಗ ಕಛೇರಿ ಮುಂತಾದ ಕಡೆ ೩೫ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಇದೀಗ ಸೇವೆಯಿಂದ ನಿವೃತ್ತಿ ಪಡೆಯಲಿದ್ದಾರೆ.
ಇವರು ತಮ್ಮ ಸರಕಾರಿ ಸೇವೆಯ ಜೊತೆಗೆ ಹಲವು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರಿಯವಾಗಿ ತೊಡಗಿಸಿಕೊಂಡು ಜನ ಮೆಚ್ಚುಗೆ ಪಡೆದಿದ್ದಾರೆ. ಭಾರತೀಯ ಜೂನಿಯರ್ ಛೇಂಬರ್, ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಸಹ ಕಾರ್ಯದರ್ಶಿಯಾಗಿ, ನರಿಮೊಗರು ಮರಾಟಿ ಸಮಾಜ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಮರಾಟಿ ಸಮಾಜ ಸೇವಾ ಸಂಘ ಕೊಂಬೆಟ್ಟು ಪುತ್ತೂರು ಇದರ ಕಾರ್ಯದರ್ಶಿ, ಅಧ್ಯಕ್ಷರಾಗಿ, ರಾಜ್ಯ ಸರಕಾರಿ ನೌಕರರ ಸಂಘ ಪುತ್ತೂರು ಘಟಕದ ಉಪಾಧ್ಯಕ್ಷರಾಗಿ, ನರಿಮೊಗರು ಶಾಲಾ ಶತಮಾನೋತ್ಸವ ಸಮಿತಿಯ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುವ ಮೂಲಕ ಸುಳ್ಯ ಮತ್ತು ಪುತ್ತೂರಿನಲ್ಲಿ ಚಿರಪರಿಚಿತರಾಗಿದ್ದಾರೆ.
ನರಿಮೊಗರು ಮರಾಟಿ ಸಮಾಜ ಸೇವಾ ಸಂಘಕ್ಕೆ ಸ್ವಂತ ನಿವೇಶನದ ವ್ಯವಸ್ಥೆ ಮತ್ತು ಮರಾಟಿ ಸಮಾಜ ಮಂದಿರ ನಿರ್ಮಾಣ ಕಾರ್ಯದಲ್ಲಿ ಇವರ ಪಾತ್ರ ಮಹತ್ವರವಾಗಿದ್ದು, ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ಶಾಖೆಯ ಉಪಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಹಕಾರಿ ನೌಕರರ ಸಂಘದ ವಾಣಿಜ್ಯ ಕಟ್ಟಡ ನಿರ್ಮಾಣಗೊಂಡಿದೆ. ಮೂಲತ: ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ದಿ. ನಾರ್ಣು ನಾಯ್ಕ ಮತ್ತು ದಿ. ದೇವಕಿಯವರ ಪುತ್ರರಾಗಿರುವ ಇವರು ಪ್ರಸ್ತುತ ನರಿಮೊಗರಿನಲ್ಲಿ ವಾಸ್ತವ್ಯವಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.