Home_Page_Advt
Home_Page_Advt
Home_Page_Advt

ಆಸ್ತಿ ತೆರಿಗೆಯನ್ನು ಕಡಿಮೆಗೊಳಿಸಲು ಪುತ್ತೂರು ಶಾಸಕರಿಂದ ಜಿಲ್ಲಾಧಿಕಾರಿಗೆ ಪತ್ರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆಯು 2020-21ರಲ್ಲಿ ಶೇ.23ರಷ್ಟು ಏರಿಕೆಯಾಗಿದ್ದು, ಕೊರೋನಾ ಲಾಕ್‌ಡೌನ್ ಪರಿಣಾಮದ ಆರ್ಥಿಕ ಸಂಕಷ್ಟದಿಂದಾಗಿ ತೆರಿಗೆ ಪಾವತಿ ಕಷ್ಟಕರವಾಗಿದ್ದು, ಏರಿಕಯಾಗಿರುವ ತೆರಿಗೆಯನ್ನು ಮೊದಲಿನಂತೆ ಇಳಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಸಂಜೀವ ಮಠಂದೂರು ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ರವಾನಿಸಿದ್ದಾರೆ.

ಕೊರೋನಾ ಲಾಕ್‌ಡೌನ್ ಪರಿಣಾಮದ ಆರ್ಥಿಕ ಸಂಕಷ್ಟದಿಂದಾಗಿ ಸಾರ್ವಜನಿಕರಿಗೆ, ವಾಣಿಜ್ಯೋದ್ಯಮ ಸಂಸ್ಥೆಗಳಿಗೆ ತೆರಿಗೆ ಪಾವತಿ ಕಷ್ಟಕರವಾಗಿರುತ್ತದೆ. ಏರಿಕೆಯಾಗಿರುವ ತೆರಿಗೆಯನ್ನು ಮೊದಲಿನಂತೆ ಇಳಿಸುವಂತೆ ಸಾರ್ವಜನಿಕರಿಂದ ಆಗ್ರಹ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ ನೀಡಿ, ಏರಿಕೆಯಾಗಿರುವ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಮೊದಲಿನ ಪ್ರಮಾಣಕ್ಕೆ ಇಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಕೋರಿದೆ ಎಂದು ಪತ್ರದಲ್ಲಿ ಉಲ್ಲೇಖಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.