Home_Page_Advt
Home_Page_Advt
Home_Page_Advt

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ, ಪಾನ್ ಮಸಾಲ ಉತ್ಪನ್ನಗಳ ಸೇವನೆ ಉಗುಳುವಿಕೆ ನಿಷೇಧಿಸಿ ಆದೇಶ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊಡಿಸಿದ್ದಾರೆ. ಕರ್ನಾಟಕ ಸಾಂಕ್ರಾಮಿಕ ರೋಗಗಳ ಆಧ್ಯಾದೇಶ 2020ರ ಸೆಕ್ಷನ್ 4(2)ಎ ಹಾಗೂ ಭಾರತೀಯ ದಂಡ ಸಂಹಿತೆ 1560 ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಕೋವಿಡ್19 ಹಾಗೂ ಇತರ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವುದನ್ನು ತಪ್ಪಿಸಿ ಹಾಗೂ ಪರಿಣಾಮಕಾರಿಯಾಗಿ ಕೊರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆದೇಶ ಹೊಡಿಸಲಾಗಿದೆ.

ರಾಜ್ಯದಲ್ಲಿ ಕೋವಿಡ್19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇಂಡಿಯನ್ ಕೌನ್ಸಿಲ್ ಮತ್ತು ಮೆಡಿಕಲ್ ರಿಸರ್ಚ್ ತಿಳಿಸಿರುವಂತೆ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಕೊರೋನಾ ಸೋಂಕು ಇತರರಿಗೆ ಹರಡುವ ದೃಷ್ಟಿಯಿಂದ ಹಾಗೂ ಸೋಂಕನ್ನು ತಡೆಗಟ್ಟುವ ಕಾರಣದಿಂದ ನಿಷೇಧ ಮಾಡಲಾಗಿದೆ.ಸಾರ್ವಜನಿಕರು ಇದನ್ನು ಉಲ್ಲಂಘಿಸಿದಲ್ಲಿ ಐಪಿಸಿ ಸೆಕ್ಷನ್ 188, 268, 269, 270 ಅಡಿಯಲ್ಲಿ ಪ್ರಾಧೀಕೃತ ಅಧಿಕಾರಿಗಳು ಅಗತ್ಯ ಕಾನೂನು ಕ್ರಮ ಕೈಗೊಳ್ಳಲು ಸರಕಾರ ಆದೇಶಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.