Home_Page_Advt
Home_Page_Advt
Home_Page_Advt

ಸ್ವಾವಲಂಬಿ ಭಾರತಕ್ಕೆ ಅಡಿಪಾಯ ಹಾಕಿದ ಮೋದಿ ಸರಕಾರ – ಸಂಜೀವ ಮಠಂದೂರು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸಮಾನಾಂತರ ಸಮನ್ವಯ, ಬಡವರ ಕಲ್ಯಾಣ ಮತ್ತು ಆರ್ಥಿಕ ಸುಧಾರಣೆಗಳಿಗೆ ಒಂದು ಉತ್ತಮ ಮಾರ್ಗ ಹಾಕಿಕೊಟ್ಟ ಮೋದಿ ಸರಕಾರ ಸ್ವಾವಲಂಬಿ ಭಾರತಕ್ಕೆ ಅಡಿಪಾಯ ಹಾಕಿದೆ ಎಂದು ಶಾಸಕ ಸಂಜೀವ ಮಠಂದೂರು ಅವರು ಹೇಳಿದ್ದಾರೆ.

ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿಯ ಎರಡನೇ ಅವಧಿಯ ಸರಕಾರ ಮೇ. 30ರಂದು ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

ಎರಡನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೇರಿ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ದೇಶದ ಜನರನ್ನು ಉದ್ದೇಶಿಸಿ ಪತ್ರ ಬರೆದಿರುವ ನರೇಂದ್ರ ಮೋದಿ ಅವರು, ಸರ್ಕಾರ ಜಾರಿಗೆ ತಂದ ಯೋಜನೆಗಳು, ಸಾಧನೆಗಳು, ಪ್ರಮುಖ ನಿರ್ಧಾರಗಳು, ಕೊರೊನಾ ವೈರಸ್ ಸಾಂಕ್ರಾಮಿಕದ ವಿರುದ್ಧದ ಹೋರಾಟ ಇತ್ಯಾದಿ ವಿಚಾರಗಳನ್ನು ಅದರಲ್ಲಿ ಉಲ್ಲೇಖಿಸಿದ್ದಾರೆ. ಒಬ್ಬ ಪ್ರಧಾನಿಗೆ ಇರುವ ಜವಾಬ್ದಾರಿಯನ್ನು ಅವರು ಮಾಡಿ ತೋರಿಸಿದ್ದಾರೆ. ಈ ಮೂಲಕ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸ್ವಾವಲಂಬಿ ಭಾರತಕ್ಕೆ ಅಡಿಪಾಯ ಹಾಕಿದ್ದಾರೆ. ದೂರದೃಷ್ಟಿಯ ನೀತಿಗಳ ಮೂಲಕ ಮೋದಿ ಅವರು ದೇಶದ ಪ್ರಜಾಪ್ರಭುತ್ವಕ್ಕೆ ಹೊಸ ಆಯಾಮ ನೀಡಿದ್ದಾರೆ. ಸರ್ಕಾರದ ಪ್ರತಿಯೊಂದು ನಿರ್ಧಾರಗಳು ಜನರ ಕಲ್ಯಾಣ, ದೇಶದ ಹಿತಾಸಕ್ತಿಯನ್ನು ಪ್ರತಿಧ್ವನಿಸಿವೆ ಎಂದು ಹೇಳಿದರು.

ಮೊದಲ ವರ್ಷದಲ್ಲೇ ಸಾಧನೆ:
ಕೊರೊನಾ ಲಾಕ್‌ಡೌನ್‌ನಿಂದ ಕಂಗೆಟ್ಟ ಅರ್ಥ ವ್ಯವಸ್ಥೆಗೆ ರೂ.20ಲಕ್ಷ ಕೋಟಿಯ ಪ್ಯಾಕೇಜ್ ಘೋಷಣೆ, ಭಯೋತ್ಪಾದನೆ ವಿರುದ್ಧ ಕಾನೂನಿನ ಕೈಗೆ ಬಲಪಡಿಸಿದ್ದು, ಕಾನೂನುಬಾಹಿರ ಚಟುವಟಿಕೆಗಳ (ತಡೆ) ತಿದ್ದುಪಡಿ ಮಸೂದೆಗೆ ಸಂಸತ್ ಅಂಗೀಕಾರ, ಮುಸ್ಲಿಂ ಹೆಣ್ಣುಮಕ್ಕಳ ವಿರುದ್ಧದ ದೌರ್ಜನ್ಯಗಳಿಗೆ ತಡೆ ಒಡ್ಡುವ ತ್ರಿವಳಿ ತಲಾಖ್ ಜಾರಿ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಅಪರಾಧಿಗೆ ಮರಣದಂಡನೆ ಶಿಕ್ಷೆ ನೀಡುವ ಕಾಯ್ದೆ ಜಾರಿ, ಮೂರು ಕಂತುಗಳಲ್ಲಿ ರೈತರಿಗೆ 6000 ಸಹಾಯಧನ ನೀಡುವ ಯೋಜನೆ ಅನುಷ್ಠಾನ, ಒಮ್ಮೆ ಉಪಯೋಗಿಸಿ ಎಸೆಯುವ ಪ್ಲಾಸ್ಟಿಕ್ ಬಳಕೆ ನಿಲ್ಲಿಸಲು ಮೋದಿ ಕರೆ. ಆಂದೋಲನ ಘೋಷಣೆಯಾದ ಕೇವಲ 15 ದಿನಗಳಲ್ಲಿ 13 ಸಾವಿರ ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ, ಸುಳ್ಳುಸುದ್ದಿ ಹರಡದಂತೆ ತಡೆಯಲು ಕ್ರಮ. ಈ ನಿಟ್ಟಿನಲ್ಲಿ ‘ಫ್ಯಾಕ್ಟ್‌ಚೆಕ್’ ವೇದಿಕೆ ಆರಂಭ ಸೇರಿದಂತೆ ಅನೇಕ ಉತ್ತಮ ಕಾರ್ಯಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಕೈಗೊಂಡಿದ್ದಾರೆ ಎಂದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.