Home_Page_Advt
Home_Page_Advt
Home_Page_Advt

ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಹೆಲ್ತ್‌ಬುಲೆಟಿನ್ ಸ್ಟಾಪ್! ಮಧ್ಯಾಹ್ನದ ಹೆಲ್ತ್ ಬುಲೆಟಿನ್ ನಿಲ್ಲಿಸಿ ರಾಜ್ಯ ಸರಕಾರ ಆದೇಶ

Puttur_Advt_NewsUnder_1
Puttur_Advt_NewsUnder_1
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಮಧ್ಯಾಹ್ನ ಹೊರಡಿಸುತ್ತಿದ್ದ ಹೆಲ್ತ್ ಬುಲೆಟಿನ್ ಅನ್ನು ನಿಲ್ಲಿಸಿದೆ. ಈ ಬಗ್ಗೆ ರಾಜ್ಯ ಸರಕಾರ ಮೇ.30ರಂದು ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಇದು ಜಾರಿಗೆ ಬಂದಿದೆ.
ಕೊರೊನಾ ಸೋಂಕಿತರು ಹಾಗೂ ಗುಣಮುಖರಾದವರ ಬಗ್ಗೆ ಇದುವರೆಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಪ್ರತಿದಿನ ಎರಡು ಬಾರಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಶನಿವಾರದಿಂದ ಸಂಜೆ ಮಾತ್ರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. 
ಕಳೆದ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಹೀಗಾಗಿ ಇತರೆ ರಾಜ್ಯಗಳಂತೆಯೇ ಮಧ್ಯಾಹ್ನದ ಬುಲೆಟಿನ್ ಬಿಡುಗಡೆ ಮಾಡದಿರಲು ಟಾಸ್ಕ್ ಫೋರ್ಸ್ ನಿರ್ಧರಿಸಿದೆ. ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಸಚಿವರು ತಿಳಿಸಿದರು.
ಸಂಜೆ ವೇಳೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ, ದಿನದ ಮಾಹಿತಿಯನ್ನು ನೀಡಲಿದ್ದಾರೆ ಎಂದು ತಿಳಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.