Home_Page_Advt
Home_Page_Advt
Home_Page_Advt

ಸರ್ವೆ: ಕ್ವಾರಂಟೈನ್ ಕೇಂದ್ರದ ಸಿಬ್ಬಂದಿಯ ಸುತ್ತಾಟ-ಆರೋಪ | ಗ್ರಾಮಸ್ಥರಲ್ಲಿ ಆತಂಕ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕ್ವಾರಂಟೈನ್ ಕೇಂದ್ರವಾಗಿರುವ ಸರ್ವೆ ಗ್ರಾಮದ ಕಲ್ಪಣೆ ಹಾಸ್ಟೆಲ್‌ನ ಸಿಬ್ಬಂದಿಯೋರ್ವರು ಹಾಸ್ಟೆಲ್ ಬಿಟ್ಟು ವಿವಿಧ ಕಡೆಗಳಲ್ಲಿ ಸುತ್ತಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು ಈ ಬಗ್ಗೆ ಗ್ರಾಮ ಮಟ್ಟದ ಅಧಿಕಾರಿಗಳಿಗೆ ಮೌಖಿಕ ದೂರನ್ನೂ ನೀಡಿರುವುದಾಗಿ ತಿಳಿದು ಬಂದಿದೆ.

ಸರ್ವೆ ಗ್ರಾಮದ ಕಲ್ಪಣೆಯಲ್ಲಿರುವ ಹಾಸ್ಟೆಲ್‌ನಲ್ಲಿ ಮುಂಬೈಯಿಂದ ಬಂದ ಗ್ರಾಮದ ನಾಲ್ಕು ಮಂದಿಗೆ ಕ್ವಾರಂಟೈನ್ ಮಾಡಲಾಗಿತ್ತು. ಆ ಪೈಕಿ ದಂಪತಿ ಹಾಗೂ ಮಗಳಿಗೆ ಕೊರೋನಾ ಸೋಂಕು ಇರುವುದು ಮೇ.೨೭ರಂದು ಧೃಢಪಟ್ಟಿದ್ದು ಮೂವರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೋರ್ವರ ಗಂಟಲ ದ್ರವವನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಅದರ ಫಲಿತಾಂಶ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಮೂವರಿಗೆ ಕೊರೋನಾ ಸೋಂಕು ಧೃಢಪಟ್ಟ ಆ ಬಳಿಕ ಮುಂಜಾಗ್ರತಾ ಕ್ರಮವಾಗಿ ಹಾಸ್ಟೆಲಿನ ವಾರ್ಡನ್ ಹಾಗೂ ಇಬ್ಬರು ಸಿಬ್ಬಂದಿಯನ್ನು ಕೂಡಾ ಪುತ್ತೂರಿನಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಆದರೆ ಹಾಸ್ಟೆಲಿನ ಓರ್ವ ಸಿಬ್ಬಂದಿ ಕರ್ತವ್ಯದಲ್ಲಿದ್ದು ಅವರು ಇದೀಗ ಸಮೀಪದ ತಿಂಗಳಾಡಿ ಹಾಗೂ ಇನ್ನಿತರ ಕೆಲವು ಕಡೆಗಳಿಗೆ ಮತ್ತು ಅಂಗಡಿಗಳಿಗೆ ದ್ವಿಚಕ್ರ ವಾಹನದ ಮೂಲಕ ಹೋಗಿ ಬರುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈಗಾಗಲೇ ಮೂರು ಮಂದಿಗೆ ಕೊರೋನಾ ಸೋಂಕು ಧೃಢಪಟ್ಟಿರುವ ಹಿನ್ನೆಲೆಯಲ್ಲಿ ಅಲ್ಲಿನ ಸಿಬ್ಬಂದಿ ಹೆಚ್ಚಿನ ಮುಂಜಾಗ್ರತೆ ವಹಿಸಬೇಕಾಗಿತ್ತು. ಆದರೆ ಈ ರೀತಿ ಬೇಕಾಬಿಟ್ಟಿ ಸುತ್ತಾಟ ನಡೆಸುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಿರುವ ಗ್ರಾಮಸ್ಥರು ಈ ವಿಚಾರದಲ್ಲಿ ಸಂಬಂಧಪಟ್ಟವರು ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.