Home_Page_Advt
Home_Page_Advt
Home_Page_Advt

ದ.ಕ. ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾಗಿ ಮೋಹನ ಗೌಡ ಕಲ್ಮಂಜ ಆಯ್ಕೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಮೋಹನ್ ಗೌಡ ಕಲ್ಮಂಜ ನೇಮಕಗೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ್ ರೈ, ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ್ ಶೆಟ್ಟಿಯವರ ಶಿಫಾರಸ್ಸಿನಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾರವರು ನೇಮಕಗೊಳಿಸಿ ಆದೇಶಿಸಿದ್ದಾರೆ.

ಮೋಹನ್ ಗೌಡ ಕಲ್ಮಂಜರವರು ಬೆಳ್ತಂಗಡಿ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕಳೆದ ಲೋಕಸಭೆ, ವಿಧಾನಸಭೆ ಚುನಾವಣೆಯ ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಸೇರಿದಂತೆ ಪಕ್ಷದಲ್ಲಿ ವಿವಿಧ ಜವಾಬ್ದಾರಿಯನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಜೊತೆಗೆ ಜಿಲ್ಲಾ ಯುವ ಒಕ್ಕಲಿಗ ವೇದಿಕೆಯ ಸಂಘಟನಾ ಸಂಚಾಲಕರಾಗಿ ಹಾಗೂ ತಾಲೂಕು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ನಿರ್ದೇಶಕರಾಗಿ ವಿವಿಧ ಸಾಮಾಜಿಕ ಸೇವಾ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಇವರು ಬಜತ್ತೂರು ಗ್ರಾಮದ ಕಾಂಚನ ಪ್ರೌಢಶಾಲಾ ಹಳೆ ವಿದ್ಯಾರ್ಥಿ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.