ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ – ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ 1997ರ ಕಲಂ 25ರ ಅನ್ವಯ ’ಸಿ’ ಪ್ರವರ್ಗದ ದೇವಸ್ಥಾನಗಳಿಗೆ 9 ಸದಸ್ಯರ ವ್ಯವಸ್ಥಾಪನಾ ಸಮಿತಿ ರಚಿಸಲು ಜಿಲ್ಲಾ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ನಡೆದ ತೀರ್ಮಾನದಂತೆ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಮುಂದಿನ ಮೂರು ವರ್ಷಗಳ ಅವಧಿಗಾಗಿ 9 ಜನ ಸದಸ್ಯರನ್ನು ಒಳಗೊಂಡು ವ್ಯವಸ್ಥಾಪನಾ ಸಮಿತಿ ರಚಿಸುವುದಕ್ಕಾಗಿ ಆಸಕ್ತಿವುಳ್ಳ ಭಕ್ತಾದಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಭಕ್ತಾದಿಗಳು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಡಿ ಜು.30ರ ಸಂಜೆಯ ಒಳಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ದ.ಕ ಮಂಗಳೂರು ಇಲ್ಲಿಗೆ ಸ್ವೀಕೃತವಾಗುವಂತೆ ಸಲ್ಲಿಸಬೇಕೆಂದು ಆಯುಕ್ತರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.