Breaking News

ಮಂಗಳೂರಿನಿಂದ ಉತ್ತರ ಪ್ರದೇಶಕ್ಕೆ ವಿಶೇಷ ಶ್ರಮಿಕ್ ರೈಲು | ಪುತ್ತೂರಿನಿಂದ 30 ಮಂದಿ ವಲಸೆ ಕಾರ್ಮಿಕರು ಊರಿಗೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಮುಟ್ಟಿಸುವ ಕೆಲಸ ಈಗಾಗಲೇ ರಾಜ್ಯ ಸರಕಾರದ ಮಾಡುತ್ತಿದ್ದು, ಜೂ.1ರಂದು ಮಂಗಳೂರಿನಿಂದ ಉತ್ತರ ಪ್ರದೇಶಕ್ಕೆ ವಿಶೇಷ ಶ್ರಮಿಕ್ ರೈಲು ಸಂಚಾರದ ಹಿನ್ನೆಲೆಯಲ್ಲಿ ಪುತ್ತೂರಿನಿಂದ 30 ಮಂದಿಯನ್ನು ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು ಅವರ ನೇತೃತ್ವದಲ್ಲಿ ಕಳುಹಿಸಿಕೊಡಲಾಯಿತು.


ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಂಚಾಕ್ಷಕಿ ಮಂಟಪದಲ್ಲಿ ವಲಸೆ ಕಾರ್ಮಿಕರ ವೈದ್ಯಕೀಯ ತಪಾಸಣೆ ನಡೆಸಿ, ದಾಖಲಿಸಿದ ಬಳಿಕ ಸರಕಾರಿ ಬಸ್‌ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸೂಚನೆ ನೀಡಿ ಮಂಗಳೂರು ರೈಲು ನಿಲ್ದಾಣಕ್ಕೆ ಕಳುಹಿಸಿಕೊಡಲಾಯಿತು. ಮಂಗಳೂರಿನಿಂದ ಮಧ್ಯಾಹ್ನ ಶ್ರಮಿಕ್ ರೈಲು ಮೂಲಕ ಅವರನ್ನು ಉತ್ತರ ಪ್ರದೇಶಕ್ಕೆ ಕಳುಹಿಸಿಕೊಡಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.