ಜಿಲ್ಲೆಯಲ್ಲಿ ಕೊರೋನಾ ತನ್ನ ಪ್ರಭಾವವನ್ನು ಮುಂದುರಿಸಿದ್ದು, ಜೂ.1ರಂದು ಮತ್ತೆ 4 ಮಂದಿಗೆ ಕೊರೋನಾ ದೃಢಪಟ್ಟಿದೆ ಎಂದು ದ.ಕ. ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ. ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನತೆಯಲ್ಲಿ ಆತಂಕ ಮೂಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 137ಕ್ಕೆ ಏರಿಕೆಯಾಗಿದೆ. ಇಂದಿನ ನಾಲ್ಕು ಸೋಂಕು ಪ್ರಕರಣಗಳ ಪೈಕಿ ಓರ್ವ ಗುಜರಾತ್ ನಿಂದ ಬಂದವರಾಗಿದ್ದು ಮತ್ತೊಬ್ಬರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದವರು. ಉಳಿದ ಇಬ್ಬರ ಸೋಂಕು ಮೂಲದ ಸಂಪರ್ಕ ಪತ್ತೆಹಚ್ಚಲಾಗುತ್ತಿದೆ.
45 ವರ್ಷದ ಮಹಿಳೆ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. 50 ವರ್ಷದ ಪುರುಷ ಗುಜರಾತ್ ರಾಜ್ಯದಿಂದ ಬಂದವರಾಗಿದ್ದಾರೆ. 24 ವರ್ಷದ ಯುವತಿ ಮತ್ತು 27 ವರ್ಷದ ಯುವಕನ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.
ರಾಜ್ಯದಲ್ಲಿ ಇಂದು ಹೊಸ 187 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ, ಇವರಲ್ಲಿ 1328 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.