Home_Page_Advt
Home_Page_Advt
Home_Page_Advt

ಜುಲೈ ತಿಂಗಳಲ್ಲಿ ಹಂತ ಹಂತವಾಗಿ ಪ್ರಾಥಮಿಕ, ಪ್ರೌಢಶಾಲಾ ತರಗತಿ ಆರಂಭಕ್ಕೆ ದಿನಾಂಕ ನಿಗದಿ | ಎಸ್‌ಡಿಎಂಸಿ, ಪೋಷಕರ ಸಭೆ ಕರೆದು ಅಭಿಪ್ರಾಯ ಸಂಗ್ರಹಕ್ಕೆ ನಿರ್ಧಾರ

Puttur_Advt_NewsUnder_1
Puttur_Advt_NewsUnder_1

ಬೆಂಗಳೂರು: ಜುಲೈ ತಿಂಗಳಿನಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ತರಗತಿಗಳನ್ನು ಹಂತ ಹಂತವಾಗಿ ಆರಂಭಿಸುವ ಸಂಬಂಧ ಶಿಕ್ಷಣ ಇಲಾಖೆ ದಿನಾಂಕ ನಿಗದಿಗೊಳಿಸಿದ್ದು ಇದಕ್ಕೆ ಸಂಬಂಧಿಸಿದಂತೆ ಎಸ್‌ಡಿಎಂಸಿ, ಪೋಷಕರ ಸಭೆ ಕರೆದು ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ.

ಜೂ.೧ರಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಪ್ರಾಥಮಿಕ, ಪ್ರೌಢ ಶಿಕ್ಷಣ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಇತರೆ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಸಭೆಯನ್ನು ನಡೆಸಲಾಗಿದ್ದು ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿರ್ದೇಶನದಂತೆ ಕೇಂದ್ರದ ಮಾರ್ಗಸೂಚಿಯ ಆಧಾರದಲ್ಲಿ ಜುಲೈ ೧ ರಿಂದ ಹಂತಹಂತವಾಗಿ ಶಾಲೆಗಳನ್ನು ತೆರೆಯಲು ಪೋಷಕರ ಅಭಿಪ್ರಾಯ ಸಂಗ್ರಹಕ್ಕಾಗಿ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಜು.೧ರಿಂದ ೪ರಿಂದ ೭ನೇ ತರಗತಿ, ಜು.೧೫ರಿಂದ ೧ರಿಂದ ೩ನೇ ತರಗತಿ, ಜು.೧೫ರಿಂದ ೮ರಿಂದ ೧೦ನೇ ಹಾಗೂ ಜು.೨೦ರಿಂದ ಪೂರ್ವ ಪ್ರಾಥಮಿಕ ತರಗತಿ ಪುನರಾರಂಭಿಸಲು ದಿನಾಂಕ ಪ್ರಸ್ತಾಪಿಸಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರುಗಳು ಪೋಷಕರ ಹಾಗೂ ಎಸ್‌ಡಿಎಂಸಿ ಸದಸ್ಯರ ಸಭೆ ಕರೆದು ಅಭಿಪ್ರಾಯ ಪಡೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.

 

ಜೂ.5ರಿಂದ ಶಾಲಾ ಕಚೇರಿಗಳ ಪ್ರಾರಂಭಕ್ಕೆ ಸೂಚನೆ
ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರ ನಿರ್ದೇಶನದಂತೆ ಕೇಂದ್ರದ ಮಾರ್ಗಸೂಚಿಯ ಆಧಾರದಲ್ಲಿ ಜುಲೈ ೧ ರಿಂದ ಹಂತಹಂತವಾಗಿ ಶಾಲೆಗಳನ್ನು ತೆರೆಯುವ ಸಂಬಂಧ ಪೋಷಕರ ಅಭಿಪ್ರಾಯ ಸಂಗ್ರಹಕ್ಕಾಗಿ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಜೂ.೫ರಿಂದಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಅಲ್ಲಿನ ಕಛೇರಿ ಸಿಬ್ಬಂದಿ ಸಂಬಂಧಿಸಿದ ಶಾಲೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗಿ, ಜೂ.೮ರಿಂದ ಶಾಲಾ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸೂಚಿಸಿದ್ದಾರೆ. ಶೈಕ್ಷಣಿಕ ತಯಾರಿಗೆ ಜೂನ್ ಮಾಹೆಯನ್ನು ಸದ್ಬಳಕೆ ಮಾಡಿಕೊಂಡು ಮುಂದಿನ ದಿನಗಳ ಪರಿಸ್ಥಿತಿಯ ಆಧಾರದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಸರ್ಕಾರದ ಕಾಲಕಾಲಿಕ ನಿರ್ದೇಶನದಂತೆ ಕ್ರಮ ವಹಿಸಲು ಸೂಚಿಸಿದ್ದಾರೆ. ಜೂ.೮ರಿಂದ ಖಾಸಗಿ ಅನುದಾನರಹಿತ ಶಾಲಾ ಕಛೇರಿಗಳ ಪ್ರಾರಂಭಕ್ಕೂ ಅನುಮತಿಸಿ ಆದೇಶ ಹೊರಡಿಸಲಾಗಿದ್ದು, ಪೋಷಕರ ಅಭಿಪ್ರಾಯವನ್ನು ಜೂ.೧೫ರೊಳಗೆ ಖಅSoನಲ್ಲಿದಾಖಲಿಸಲು ಸೂಚಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.