HomePage_Banner
HomePage_Banner
HomePage_Banner

ಸದ್ಯ ಶಾಲೆಗಳ ಆರಂಭವಿಲ್ಲ-ಪೋಷಕರಿಗೆ ಆತಂಕ ಬೇಡ | ಪೋಷಕರ ಅಭಿಪ್ರಾಯ ಕ್ರೋಢೀಕರಣದ ಬಳಿಕ ನಿರ್ಧಾರ

Puttur_Advt_NewsUnder_1
Puttur_Advt_NewsUnder_1
  • ಜೂ.10-12:ಪೋಷಕರ ಸಭೆ – ಅಭಿಪ್ರಾಯ ಕ್ರೋಢೀಕರಣ
  • ಜುಲೈ 1ರಿಂದ ಶಾಲೆ  ತೆರೆಯುವುದಿಲ್ಲ

ಬೆಂಗಳೂರು: ಸದ್ಯಕ್ಕೆ ಶಾಲೆಗಳನ್ನು ಆರಂಭಿಸುವುದಿಲ್ಲ, ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರ ಮೇ 30 ರಂದು, ಶಾಲೆಗಳನ್ನು ಆರಂಭಿಸುವ ಬಗ್ಗೆ ಪೋಷಕರ ಅಭಿಪ್ರಾಯವನ್ನು ಕೇಳಿ ಎಂದು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ನಾವು ರಾಜ್ಯದಲ್ಲಿರುವ ಶಾಲೆಗಳಿಗೆ ಸುತ್ತೋಲೆ ಕಳುಹಿಸಿ ಪೋಷಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಜೂನ್ 10, 11, 12ರಂದು ಎಲ್ಲ ಶಾಲೆಗಳಲ್ಲಿ ಪೋಷಕರ ಸಭೆ ನಡೆಯಲಿದೆ. ಪೋಷಕರ ಅಭಿಪ್ರಾಯಗಳು ಕ್ರೋಢೀಕರಣವಾಗಿ ಜೂನ್ 15ಕ್ಕೆ ಸರ್ಕಾರವನ್ನು ತಲುಪಬಹುದು. ನಂತರ ಶಾಲೆ ಆರಂಭಿಸಬೇಕೋ? ಬೇಡವೋ ಎಂಬುದನ್ನು ನಿರ್ಧಾರ ಮಾಡಲಾಗುವುದು. ಜುಲೈ 1 ರಿಂದ ಶಾಲೆಯನ್ನು ತೆರೆಯುವುದಿಲ್ಲ. ಅಭಿಪ್ರಾಯ ಸಂಗ್ರಹವಷ್ಟೇ ಎಂದು ಸಚಿವರು ಸ್ಪಷ್ಟ ಪಡಿಸಿದರು.

ಈ ಸಂದರ್ಭದಲ್ಲಿ ಎರಡು ಅಭಿಪ್ರಾಯಗಳು ವ್ಯಕ್ತವಾಗಿದೆ. ಕೊರೋನಾ ದೀರ್ಘ ಕಾಲ ಇದ್ದರೆ ಅಲ್ಲಿಯವರೆಗೆ ಶಾಲೆಯನ್ನು ಮುಂದೂಡಬೇಕೇ ಅಥವಾ ಕೊರೋನಾದ ಜೊತೆಗೆ ನಾವು ಬದುಕಬೇಕೇ ಎಂಬ ಪ್ರಶ್ನೆ ಎದ್ದಿದೆ. ಈಗಾಗಲೇ ಚಿಕನ್ ಗುನ್ಯಾ ರೀತಿಯ ಕಾಯಿಲೆ ಜೊತೆ ನಾವು ಬದುಕುತ್ತಿದ್ದೇವೆ. ಇದೇ ರೀತಿಯಾಗಿ ಕೊರೋನಾ ಜೊತೆ ಬದುಕಲು ಸಾಧ್ಯವಿಲ್ಲವೇ ಎಂಬ ಪ್ರಶ್ನೆಯೂ ಎದ್ದಿದೆ. ಇದರ ಜೊತೆಯಲ್ಲಿ ಶಾಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವುದು ಹೇಗೆ ಎಂಬ ಬಗ್ಗೆ ನಾವು ಚರ್ಚಿಸಬೇಕಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.