Home_Page_Advt
Home_Page_Advt
Home_Page_Advt

ನಗರಸಭೆಯಿಂದ ಕಿಲ್ಲೆ ಮೈದಾನದಲ್ಲಿ ವಿಶ್ವಪರಿಸರ ದಿನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ನಗರಸಭೆ ವತಿಯಿಂದ ಕಿಲ್ಲೆ ಮೈದಾನದಲ್ಲಿ 25ಕ್ಕೂ ಹೆಚ್ಚು ಗಿಡಗಳನ್ನು ನೆಡುವ ಮೂಲಕ ವಿಶ್ವಪರಿಸರ ದಿನ ವನಮಹೋತ್ಸವ ಆಚರಣೆ ಮಾಡಲಾಯಿತು.

ನಗರಸಭಾ ಪೌರಾಯುಕ್ತೆ ರೂಪಾ ಶೆಟ್ಟಿ ಅವರು ಗಿಡ ನಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿ, ಗಿಡಗಳನ್ನು ನೆಡುವ ಜತೆಗೆ ಅದನ್ನು ಉಳಿಸಿ ಬೆಳೆಸುವ ಕಾರ್ಯ ಅತೀ ಅಗತ್ಯವಾಗಿದೆ. ವಾತಾವರಣ ಹಾಳಾಗುತ್ತಿರುವ ಇಂದಿನ ದಿನಗಳಲ್ಲಿ ಪರಿಸರ ಬಗ್ಗೆ ಹೆಚ್ಚಿನ ಕಾಳಜಿಯನ್ನು ಜನತೆ ವಹಿಸಬೇಕು. ತಮ್ಮ ಮನೆಯ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜತೆಗೆ ಗಿಡಗಳನ್ನು ಬೆಳೆಸುವ ಮೂಲಕ ನಾಡಿನ ಅಭಿವೃದ್ಧಿಗೆ ಪೂರಕವಾಗಬೇಕು ಎಂದು ಹೇಳಿದರು. ನಗರಸಭೆಯ ಪರಿಸರ ಅಭಿಯಂತರ ಗುರುಪ್ರಸಾದ್ ಶೆಟ್ಟಿ, ಹಿರಿಯ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ, ಶ್ವೇತಾ ಕಿರಣ್, ಕಿರಿಯ ಅಭಿಯಂತರ ದಿವಾಕರ್, ಕಂದಾಯ ನಿರೀಕ್ಷಕ ರಾಧಾಕೃಷ್ಣ ಗೌಡ, ರಾಜೇಶ್ ನಾಕ್ ಹಾಗೂ ನಗರಸಭಾ ಅಧಿಕಾರಿ ವರ್ಗ, ಸಿಬಂದಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.