ಪುತ್ತೂರು: ರಾಜ್ಯದ ಎಲ್ಲಾ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಶಿಕ್ಷಕರು ಜೂ.8ರಿಂದ ಶಾಲಾ ಕಚೇರಿ ಕರ್ತವ್ಯಗಳಿಗೆ ಕಡ್ಡಾಯವಾಗಿ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.
ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಜೂ.5ರಂದು ಶಾಲೆಗೆ ಹಾಜರಾಗಿ ಶಾಲೆ ಪುನರಾರಂಭದ ಕುರಿತು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ನೀಡಿರುವ ಸೂಚನೆಯಂತೆ ರಾಜ್ಯಾದ್ಯಂತ ದೂರದ ಊರುಗಳಿಂದ ಬರುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಜೂನ್ 8ರಿಂದ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಲು ಸೂಚಿಸಿದೆ.