ನಿಡ್ಪಳ್ಳಿ: ಪಾಣಾಜೆ ಗ್ರಾಮ ಪಂಚಾಯತ್ ಕಚೇರಿಯ ವಿಸ್ತೃತ ಕಟ್ಟಡದ ಉದ್ಘಾಟನಾ ಸಮಾರಂಭ ಜೂ.8 ರಂದು ಬೆಳಿಗ್ಗೆ ಗಂಟೆ 11 ಕ್ಕೆ ನಡೆಯಲಿದೆ.
ಪುತ್ತೂರು ಶಾಸಕ ಸಂಜೀವ ಮಠಂದೂರು ಕಟ್ಟಡ ಉದ್ಘಾಟಿಸಲಿದ್ದು ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ನಾರಾಯಣ ಪೂಜಾರಿ ತೂಂಬಡ್ಕ ಅಧ್ಯಕ್ಷತೆ ವಹಿಸಲಿರುವರು.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ತಾಲೂಕು ಪಂಚಾಯತ್ ಸದಸ್ಯೆ ಮೀನಾಕ್ಷಿ ಮಂಜುನಾಥ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸತ್ಯೇಂದ್ರ ಸಾಲಿಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಪಿಡಿಒ ಚಂದ್ರಮತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.