HomePage_Banner
HomePage_Banner
HomePage_Banner
HomePage_Banner

ಕಾವು ಸಹಕಾರ ಸಂಘದಿಂದ ಆಶಾ ಕಾರ್ಯಕರ್ತೆಯರಿಗೆ ತಲಾ ರೂ. 3ಸಾವಿರ ಪ್ರೋತ್ಸಾಹಧನ

Puttur_Advt_NewsUnder_1
Puttur_Advt_NewsUnder_1

ವರದಿ: ಸುನೀಲ್ ಎನ್. ಕಾವು
ಚಿತ್ರ: ಎನ್.ಎಸ್ ಕಾವು

  • ಮಾಡ್ನೂರು-ಈಶ್ವರಮಂಗಲ ಹಾಲು ಉ.ಸ.ಸಂಘದಿಂದ ಆಹಾರ ಸಾಮಾಗ್ರಿ ಕಿಟ್ ವಿತರಣೆ

ಕಾವು: ಕೋವಿಡ್-೧೯ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಕೊರೋನಾ ವಾರಿಯರ್ಸ್‌ಗಳಾಗಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಿದ ಆಶಾ ಕಾರ್ಯಕರ್ತೆಯರಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಪ್ರೋತ್ಸಾಹ ಧನ ವಿತರಣೆ ಮತ್ತು ಮಾಡ್ನೂರು ಹಾಗೂ ಈಶ್ವರಮಂಗಲ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಆಹಾರ ಸಾಮಾಗ್ರಿ ಕಿಟ್ ವಿತರಣಾ ಕಾರ್ಯಕ್ರಮವು ಜೂ.೬ರಂದು ಕಾವು ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.

ನೈತಿಕ ಧೈರ್ಯ ತುಂಬುವ ಕೆಲಸ-ನನ್ಯ
ಸಭಾಧ್ಯಕ್ಷತೆ ವಹಿಸಿ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನದ ಚೆಕ್ ವಿತರಿಸಿದ ಕಾವು ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಮಾತನಾಡಿ ಕೊರೋನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ದೇಶದ ಆರ್ಥಿಕತೆ ಕುಸಿತಗೊಂಡಾಗ ಸಾಮಾಜಿಕ ಜವಾಬ್ದಾರಿ ನೆಲೆಯಲ್ಲಿ ನಮ್ಮ ಸಂಘದಿಂದ ಪ್ರಧಾನ ಮಂತ್ರಿಯವರ ಕೋವಿಡ್ ಪರಿಹಾರ ನಿಧಿ ಮತ್ತು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ತಲಾ ರೂ.೧ ಲಕ್ಷ ದೇಣಿಗೆಯನ್ನು ನೀಡಲಾಗಿದೆ, ಜತೆಗೆ ಲಾಕ್‌ಡೌನ್ ಸಂದರ್ಭದಲ್ಲಿ ಸಂಘದಿಂದ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡಲಾಗಿದೆ, ಅದೇ ರೀತಿ ಕೊರೋನಾ ವೈರಸ್‌ನ್ನು ತಡೆಗಟ್ಟಲು ಆರೋಗ್ಯ ಇಲಾಖೆಯ ಮೂಲಕ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಗುರುತಿಸಿ, ಸಹಕಾರ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ನಮ್ಮ ಸಂಘದಿಂದ ಮಾಡ್ನೂರು ಮತ್ತು ನೆ.ಮುಡ್ನೂರು ಗ್ರಾಮದ ಒಟ್ಟು ೧೩ ಆಶಾ ಕರ್ಯಕರ್ತೆಯರಿಗೆ ತಲಾ ರೂ. ೩ ಸಾವಿರ ಪ್ರೋತ್ಸಾಹ ಧನವನ್ನು ವಿತರಿಸಿದ್ದೇವೆ ಆ ಮೂಲಕ ಕೊರೋನಾ ವಾರಿಯರ್ಸ್‌ಗಳಿಗೆ ನೈತಿಕ ಧೈರ್ಯ ತುಂಬುವ ಕೆಲಸ ಆಗಿದೆ, ಆಶಾ ಕಾರ್ಯಕರ್ತೆಯರ ಕೆಲಸವನ್ನು ಸಮಾಜ ಗುರುತಿಸುವಂತಾಗಿದೆ ಎಂದು ಹೇಳಿದರು.

ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್ ಕೊಚ್ಚಿಯವರು ಆಶಾಕಾರ್ಯಕರ್ತೆಯರ ಸೇವೆಯನ್ನು ಅಭಿನಂದಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ರಮೇಶ್ ಪೂಜಾರಿ, ಈಶ್ವರಮಂಗಲ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಅಡೀಲು, ಕಾರ್ಯದರ್ಶಿ ಶ್ರೀಪತಿ ಭಟ್, ಮಾಡ್ನೂರು ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಸುರೇಂದ್ರ ಬೋರ್ಕರ್ ನನ್ಯ, ಕಾರ್ಯದರ್ಶಿ ಬಾಲಕೃಷ್ಣ ಕೆದಿಲಾಯ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕ ಲೋಕೇಶ್ ಚಾಕೋಟೆ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿ ವಂದಿಸಿದರು. ಸಂಘದ ಸಿಬ್ಬಂದಿ ಸುನೀಲ್ ಎನ್ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮಂಜುನಾಥ ರೈ ಸಾಂತ್ಯ, ಪ್ರವೀಣ್ ರೈ ಮೇನಾಲ, ಶಿವಪ್ರಸಾದ್ ಕೊಚ್ಚಿ, ಶ್ರೀಧರ್ ರಾವ್ ನಿಧಿಮುಂಡ, ಚಂದ್ರಶೇಖರ ಗೌಡ, ಹೇಮಾವತಿ ಚಾಕೋಟೆ, ಮೋಹನಾಂಗಿಯವರು ಪಾಲ್ಗೊಂಡಿದ್ದರು.

೧೩ ಆಶಾ ಕಾರ್ಯಕರ್ತೆಯರಿಗೆ ಒಟ್ಟು ರೂ. ೩೯ಸಾವಿರ ಪ್ರೋತ್ಸಾಹಧನ:
ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಮಾಡ್ನೂರು ಗ್ರಾಮದ ೫ ಮತ್ತು ನೆಟ್ಟಣಿಗೆ ಮುಡ್ನೂರು ಗ್ರಾಮದ ೮ ಸೇರಿ ಒಟ್ಟು ೧೩ ಆಶಾ ಕಾರ್ಯಕರ್ತೆಯರಿಗೆ ಕೊರೋನಾ ಸೇವೆಯನ್ನು ಗುರುತಿಸಿ ತಲಾ ರೂ. ೩೦೦೦ದಂತೆ ಒಟ್ಟು ರೂ. ೩೯,೦೦೦ ಮೊತ್ತವನ್ನು ಪ್ರೋತ್ಸಾಹಧನವಾಗಿ ಚೆಕ್ ಮೂಲಕ ಹಸ್ತಾಂತರಿಸಲಾಯಿತು.

ಆಹಾರ ಸಾಮಾಗ್ರಿ ಕಿಟ್ ವಿತರಣೆ:
ಮಾಡ್ನೂರು ಮತ್ತು ಈಶ್ವರಮಂಗಲ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಮಾಡ್ನೂರು ಗ್ರಾಮದ ೫ ಮತ್ತು ನೆಟ್ಟಣಿಗೆ ಮುಡ್ನೂರು ಗ್ರಾಮದ ೮ ಸೇರಿ ಒಟ್ಟು ೧೩ ಆಶಾ ಕಾರ್ಯಕರ್ತೆಯರಿಗೆ ಕೊರೋನಾ ಸೇವೆಯನ್ನು ಗುರುತಿಸಿ ಆಹಾರ ಸಾಮಾಗ್ರಿಯ ಕಿಟ್‌ನ್ನು ವಿತರಿಸಲಾಯಿತು.

ಪಡಿತರ ಸಿಬ್ಬಂದಿಗಳಿಗೆ ಪ್ರೋತ್ಸಾಹಧನ:
ಲಾಕ್‌ಡೌನ್ ಸಂದರ್ಭದಲ್ಲಿ ಪಡಿತರ ವಿತರಣೆಯನ್ನು ಸಮರ್ಪಕ ರೀತಿಯಲ್ಲಿ ನಿರ್ವಹಿಸಿದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿಗಳಾದ ರಾಜೇಶ್ ಡಿ, ವಿಶ್ವನಾಥ ಕೆ, ಸೀತಾರಾಮರವರಿಗೆ ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ತಲಾ ೨ ಸಾವಿರದಂತೆ ಪ್ರೋತ್ಸಾಹ ಧನ ಮತ್ತು ಪ್ರಸಾದ್ ಕೆರೆಮಾರುರವರಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ ಮಾಡಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.