HomePage_Banner
HomePage_Banner
HomePage_Banner

ಶಾಲಾ ಕಾಲೇಜುಗಳ ಪುನರಾರಂಭ ಆಗಸ್ಟ್ 15ರ ಬಳಿಕ:ಕೇಂದ್ರ ಸಚಿವ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೋನಾದಿಂದಾಗಿ ದೇಶದೆಲ್ಲೆಡೆ ಲಾಕ್‌ಡೌನ್ ಆಗಿ ಮುಚ್ಚಲ್ಪಟ್ಟಿರುವ ಶಾಲಾ-ಕಾಲೇಜುಗಳನ್ನು ಆಗಸ್ಟ್ ೧೫ರ ಬಳಿಕ ಆರಂಭಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯೊಂದರ ಸಂದರ್ಶನಲ್ಲಿ ಮಾತನಾಡಿದ ಸಚಿವರು, ದೇಶಾದ್ಯಂತ ಮಾರ್ಚ್ ೧೬ರಿಂದ ಮುಚ್ಚಲ್ಪಟ್ಟಿರುವ ಶಾಲಾ-ಕಾಲೇಜುಗಳನ್ನು ಆಗಸ್ಟ್ ತಿಂಗಳಿನಲ್ಲಿ ಮರು ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.ದೇಶಾದ್ಯಂತ ಲಾಕ್‌ಡೌನ್ ಜಾರಿಯಾಗಿ ಸುಮಾರು ೭೦ ದಿನಗಳೇ ಕಳೆದಿವೆ.ವಿದ್ಯಾರ್ಥಿಗಳು ಬಾಕಿ ಉಳಿದಿರುವ ಪರೀಕ್ಷೆಗಳನ್ನು ಬರೆಯಲು ಕಾಯುತ್ತಿದ್ದಾರೆ.ಆಗಸ್ಟ್ ೧೫ರೊಳಗೆ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುವುದು. ಆ ಬಳಿಕವಷ್ಟೇ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.

ಕೊರೋನಾ ವೈರಸ್‌ನಿಂದಾಗಿ ಕೆಲವು ಬೋರ್ಡ್ ಪರೀಕ್ಷೆಗಳನ್ನು ಮಾರ್ಚ್ ತಿಂಗಳಿನಲ್ಲಿ ಮುಂದೂಡಲಾಗಿತ್ತು. ಆ ಪರೀಕ್ಷೆಗಳನ್ನು ಮುಂದಿನ ತಿಂಗಳು ನಡೆಸಲಾಗುವುದು.ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್, ಜೆಇಇ ಹಾಗೂ ಇನ್ನುಳಿದ ಪರೀಕ್ಷೆಗಳನ್ನು ಕೂಡಾ ಜುಲೈ ತಿಂಗಳಿನಲ್ಲಿಯೇ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.