HomePage_Banner
HomePage_Banner

ಜೂ.30ರವರೆಗೆ ಪದವಿ ಪ್ರಾಧ್ಯಾಪಕರಿಗೆ ರಜೆ: ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ

ಪುತ್ತೂರು:  ಕೊರೊನಾ ಲಾಕ್ ಡೌನ್ ಹಿನ್ನೆಲೆ ಜೂನ್ 16ರಿಂದ 30 ರವರೆಗೆ ಪದವಿ ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಜೊತೆಗೆ ಜೂ.15ರೊಳಗೆ ಆನ್ಲೈನ್ ಕ್ಲಾಸ್ ಗಳ ಮೂಲಕ ಸಿಲಬಸ್ ಮುಗಿಸುವಂತೆ ಸೂಚಿಸಲಾಗಿದೆ.

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದೆರಡು ತಿಂಗಳಿಗೂ ಅಧಿಕ ಕಾಲದಿಂದಲೂ ಶಾಲಾ, ಕಾಲೇಜುಗಳು ಬಂದ್ ಆಗಿವೆ. ಆದರೆ ಈಗ ಇಂದಿನಿಂದ ಶಾಲೆಗಳು ಪುನರಾರಂಭಗೊಂಡಿವೆ. ಆದರೆ ಪದವಿ ತರಗತಿಗಳಿಗೆ ಈ ಹಿಂದೆ ಜೂನ್ 15ರ ಒಳಗೆ ಆನ್ ಲೈನ್ ತರಗತಿಗಳನ್ನು ಪೂರೈಸಬೇಕೆಂದು ಉನ್ನತ ಶಿಕ್ಷಣ ಇಲಾಖೆ ಸೂಚನೆಯನ್ನು ನೀಡಿತ್ತು. ಇದೀಗ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜೂನ್ 16 ರಿಂದ 30 ರವರೆಗೆ ಪದವಿ ಕಾಲೇಜು ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ರಜೆ ಘೋಷಿಸಲಾಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳ ಮುಂದಿನ ಶೈಕ್ಷಣಿಕ ವರ್ಷದ ಕುರಿತು ಕೇಂದ್ರ ಸರ್ಕಾರ ಜುಲೈನಲ್ಲಿ ನಿರ್ಧಾರ ಕೈಗೊಳ್ಳಲಿದ್ದು, ಈ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.