ಪುತ್ತೂರು: 33ಕೆ.ವಿ ಪುತ್ತೂರು-ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಹಾಗೂ 33ಕೆ.ವಿ ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.11ರ ಪೂರ್ವಾಹ್ನ 10ರಿಂದ ಅಪರಾಹ್ನ 5ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ 33/11 ಕೆ.ವಿ ಸವಣೂರು, ನೆಲ್ಯಾಡಿ, ಕಡಬ ಮತ್ತು ಸುಬ್ರಹ್ಮಣ್ಯ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫಿಡರ್ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.