HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕಾರಂತರ ಕರ್ಮಭೂಮಿಯಲ್ಲಿ ನಿರಂತರ ಕಾರ್ಯಕ್ರಮ ನಡೆಯಬೇಕು | ಪುತ್ತೂರು ಬಾಲವನದಲ್ಲಿ ಇಲಾಖಾಧಿಕಾರಿಗಳಿಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಡಾ. ಶಿವರಾಮ ಕಾರಂತರ ಕರ್ಮಭೂಮಿಯಾಗಿರುವ ಪುತ್ತೂರಿನ ಬಾಲವನದಲ್ಲಿ ನಿರಂತರವಾಗಿ ಕಾರ್ಯಕ್ರಮ ನಡೆಯಬೇಕು. ಕಾರಂತರ ಬದುಕಿನ ಆದರ್ಶಗಳಿಗೆ ಧಕ್ಕೆ ಬಾರದಂತೆ ಕಾರ್ಯಕ್ರಮಗಳು ನಡೆಯಬೇಕು. ಅದಕ್ಕೆ ಏನೆಲ್ಲಾ ಬೇಕೋ ಅದನ್ನು ತಕ್ಷಣ ಮಾಡಬೇಕು. ಮುಂದಿನ ಜುಲೈ ತಿಂಗಳಿನಿಂದ ವಾರಕ್ಕೆ ಎರಡು ಕಾರ್ಯಕ್ರಮಗಳು ನಡೆಯಲೇ ಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿವಿಧ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಪುತ್ತೂರು ಪರ್ಲಡ್ಕದಲ್ಲಿರುವ ಡಾ. ಶಿವರಾಮ ಕಾರಂತರ ಬಾಲವನದಲ್ಲಿನ ಆರ್ಟ್ ಗ್ಯಾಲರಿಯಲ್ಲಿ ಜೂ.9ರಂದು ನಡೆದ ಕನ್ನಡ ಸಂಸ್ಕೃತಿ, ಪ್ರವಾಸೋದ್ಯಮ, ಮೀನುಗಾರಿಕೆ, ಅರಣ್ಯ ಇಲಾಖೆ ಸೇರಿದಂತೆ ಬಾಲವನ ಅಭಿವೃದ್ಧಿ ಪಡಿಸುವಲ್ಲಿ ಸಹಕಾರಿಯಾಗು ಇಲಾಖಾಧಿಕಾರಿಗಳೊಂದಿಗೆ ಶಾಸಕ ಸಂಜೀವ ಮಠಂದೂರು ಅವರ ಉಪಸ್ಥಿತಿಯಲ್ಲಿ ಅವರು ಮಾತನಾಡಿದರು. ಸಾಹಿತ್ಯ, ಸಂಸ್ಕೃತಿ, ಬ್ಯಾಲೆ, ಯಕ್ಷಗಾನ, ಅವರ ಎಲ್ಲಾ ವಿಜ್ಞಾನದ ಸಾಹಿತ್ಯಗಳು, ಮಕ್ಕಳ ಬಗ್ಗೆ ಅವರು ಮಾಡಿರುವ ಬರವಣಿಗೆಗಳು, ಬದುಕಿನ ವಿವಿಧ ಮಜಲುಗಳನ್ನು ಅರ್ಥ ಮಾಡಿಕೊಂಡ ಎಲ್ಲಾ ಘಟನೆಗಳು ಪುತ್ತೂರಿನ ಬಾಲನದಲ್ಲಿ ಎಂಬ ಕಲ್ಪಣೆ ಇದೆ. ಈ ನಿಟ್ಟಿನಲ್ಲಿ ಇಲ್ಲಿ ನಿರಂತರ ಕಾರ್ಯಕ್ರಮ ನಡೆಯಬೇಕು. ಕಾರಂತರ ಕುರಿತಾದ ಅನೇಕ ವಿಚಾರಗೋಷ್ಠಿಗಳು ನಡೆಯಬೇಕು ಕಾರಂತರು ಬಿಟ್ಟುಹೋದ ಆದರ್ಶಗಳನ್ನು ಎತ್ತಿಹಿಡಿಯುವ ಕೆಲಸ ಆಗಬೇಕು ಎಂದ ಅವರು ಜ್ಞಾನಪೀಠ ಪ್ರಶಸ್ತಿಪುರಸ್ಕೃತ ಡಾ. ಶಿವರಾಮ ಕಾರಂತರ ಅವರ ಬದುಕಿನ ಎಲ್ಲಾ ಅಂಶಗಳನ್ನು ಪುನರಪಿ ನೆನೆಪಿಸುವ ಕಾರ್ಯ ಆಗಬೇಕಾಗಿದೆ ಎಂದು ಹೇಳಿದರು. ಬಳಿಕ ಅವರು ಬಾಲವನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಅವರು ಸಹಾಯಕ ಕಮೀಷನರ ಡಾ.ಯತೀಶ್ ಉಳ್ಳಾಲ್ ಅವರ ಮೂಲಕ ಮಾಹಿತಿ ಪಡೆದು ಕೊಂಡರು. ನಿಂತುಹೋದ ಕಾಮಗಾರಿಗಳಿಗೆ ಮರು ಜೀವ ತುಂಬುವ ಕೆಲಸ ಆಗಬೇಕೆಂದು ಸೂಚನೆ ನೀಡಿದರಲ್ಲದೆ ಕಾಮಗಾರಿ ಗುತ್ತಿಗೆ ಪಡೆದವರು ಕಾಮಗಾರಿ ಕುರಿತು ನಿರ್ಲಕ್ಷ್ಯ ವಹಿಸಿದ್ದರೆ ಅವರ ಮೇಲೆ ಕ್ರಿಮಿನಲ್ ಕೇಸು ದಾಖಲಿಸುವಂತೆಯೂ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ತಹಶೀಲ್ದಾರ್ ರಮೇಶ್ ಬಾಬು ಸೇರಿದಂತೆ ನಗರಸಭಾ ಸದಸ್ಯರಾದ ಪಿ.ಜಿ.ಜಗನ್ನಿವಾಸ ರಾವ್, ದೀಕ್ಷಾ ಪೈ, ಸಾಮಾಜಿಕ ವಲಯ ಅರಣ್ಯಾಧಿಕಾರಿ ವಿದ್ಯಾ ರಾಣಿ, ಡಾ. ಅಮೃತ ಮಲ್ಲ, ಪ್ರವಸೋದ್ಯಮ ಇಲಾಖೆ, ಮೀನುಗಾರಿಕೆ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.