HomePage_Banner
HomePage_Banner
HomePage_Banner

ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಫೌಝಿಯಾ ಭೇಟಿ

Puttur_Advt_NewsUnder_1
Puttur_Advt_NewsUnder_1

೦ ಕಾರ‍್ಯ ಯೋಜನೆ, ಹೊಸ ಕಟ್ಟಡ ನಿರ್ಮಾಣದ, ಬಗ್ಗೆ ಮೆಚ್ಚುಗೆ

ಉಪ್ಪಿನಂಗಡಿ: ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಣಿ ಹಾಗೂ ಐ.ಎ.ಎಸ್. ಅಧಿಕಾರಿ ಫೌಝಿಯಾ ತರುನ್ನುಮ್ ಜೂ. 8ರಂದು ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯ ಶ್ರೀ ರಾಮಕೃಷ್ಣ ಮಿಷನ್ ಸಹಕಾರದೊಂದಿಗೆ ನಿರ್ವಹಿಸಲ್ಪಡುತ್ತಿರುವ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತ್ಯಾಜ್ಯ ನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿ, ಮಾಹಿತಿ ಪಡೆದುಕೊಂಡ ಅವರು ಯೋಜನೆ ಅನುಷ್ಠಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅದಾಗ್ಯೂ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ಪಡೆದುಕೊಂಡು ಇದೊಂದು ಮಾದರಿ ಗ್ರಾಮ ಪಂಚಾಯಿತಿ ಎಂದು ಬಣ್ಣಿಸಿ ಪ್ರಶಂಸೆ ವ್ಯಕ್ತಪಡಿಸಿದರು.


ಕಾರ್ಯನಿಮಿತ್ತ ದ.ಕ. ಜಿಲ್ಲೆಗೆ ಭೇಟಿ ನೀಡಿದ ಸಂಧರ್ಭದಲ್ಲಿ ಜಿಲ್ಲೆಯ ವ್ಯವಸ್ಥಿತ ತ್ಯಾಜ್ಯ ನಿರ್ವಹಣಾ ಘಟಕದ ವೀಕ್ಷಣೆಯ ಆಪೇಕ್ಷೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಸ್ವಚ್ಚ ಭಾರತ್ ಮಿಷನ್ ಸಂಯೋಜಕಿಯಾದ ಮಂಜುಳಾರವರೊಂದಿಗೆ ಉಪ್ಪಿನಂಗಡಿಯ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಅಬ್ದುಲ್ ರಹಿಮಾನ್, ಪಂಚಾಯಿತಿ ಸದಸ್ಯರಾದ ಯು.ಟಿ. ಮಹಮ್ಮದ್ ತೌಶಿಫ್, ಚಂದ್ರಶೇಖರ್ ಮಡಿವಾಳ, ನೈರ್ಮಲ್ಯ ಸಮಿತಿ ಉಪಾಧ್ಯಕ್ಷ ಜಯಂತ ಪೊರೋಳಿ, ಗ್ರಾಮ ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ರವಿಚಂದ್ರ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.