HomePage_Banner
HomePage_Banner
HomePage_Banner

ಐತ್ತೂರು: ಆಶಾ ಕಾರ್ಯಕರ್ತೆ ಸೌಮ್ಯ ನಾಪತ್ತೆ

Puttur_Advt_NewsUnder_1
Puttur_Advt_NewsUnder_1

ಕಡಬ: ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆಯೋರ್ವರು ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಟ್ಟತ್ತಿಲ್ ಮನೆಯ ಕೆ ಅನೂಪ್ ಎಂಬುವರ ಪತ್ನಿ ಸೌಮ್ಯ (34 ವ.) ಎಂಬವರು ನಾಪತ್ತೆಯಾದವರು.ಈ ಬಗ್ಗೆ ಅವರ ಪತಿ ಅನೂಪ್ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೌಮ್ಯ ಅವರು ಐತ್ತೂರು ಗ್ರಾಮ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿದ್ದರು. ಕೊರೋನಾ ವಾರಿಯರ್ ಆಗಿ ಕೂಡಾ ಇವರು ಕೆಲಸ ಮಾಡಿಕೊಂಡಿದ್ದರು. ಜೂ.8ರಂದು ಬೆಳಿಗ್ಗೆ 10.30ಕ್ಕೆ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗರ್ಭಿಣಿ ಮಹಿಳೆಯೋರ್ವರನ್ನು ಡೆಲಿವರಿಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಲು ಇದೆ ಎಂದು ಹೇಳಿ ಹೊರಟ ಇವರು ನಂತರದಲ್ಲಿ ಕಾಣೆಯಾಗಿದ್ದಾರೆ. ಆಟೋ ರಿಕ್ಷಾವನ್ನು ಬಾಡಿಗೆ ಮಾಡಿ ಕಡಬ ಸರಕಾರಿ ಆಸ್ಪತ್ರೆಗೆ ಬಂದಿದ್ದಾಗಿ ಮಾಹಿತಿ ಲಭಿಸಿದೆ. ಆಟೋರಿಕ್ಷಾ ಚಾಲಕನು ಕಡಬ ಸರ್ಕಾರಿ ಆಸ್ಪತ್ರೆಯವರೆಗೆ ಹೋಗಿ ಸೌಮ್ಯ ರನ್ನು ಬಿಟ್ಟು ಬಂದಿದ್ದರು.

ನಂತರ ಸಂಜೆಯಾದರೂ ಪತ್ನಿ ಮನೆಗೆ ಬಾರದೇ ಇದ್ದುದರಿಂದ ಅನೂಪ್ ಅವರು ಸಂಬಂಧಿಕರ ಮತ್ತು ಪರಿಚಯಸ್ಥರ ಹಾಗೂ ಸುತ್ತಮುತ್ತ ಪರಿಸರ ವ್ಯಾಪ್ತಿಯಲ್ಲಿ ಹುಡುಕಾಟ ನಡೆಸಿದರೂ ಸೌಮ್ಯ ರವರು ಪತ್ತೆಯಾಗಿರುವುದಿಲ್ಲ.ಈ ಹಿನ್ನೆಲೆಯಲ್ಲಿ ಅನೂಪ್‌ರವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.