HomePage_Banner
HomePage_Banner
HomePage_Banner
HomePage_Banner

ಡಿಕೆಶಿ ಪದಗ್ರಹಣಕ್ಕೆ ಷರತ್ತುಬದ್ಧ ಅನುಮತಿ – ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಎಸ್ ವೈ ಹೇಳಿಕೆ

Puttur_Advt_NewsUnder_1
Puttur_Advt_NewsUnder_1
  • ಪದಗ್ರಹಣ ದಿನಾಂಕದ ಸ್ಪಷ್ಟತೆಯಿಲ್ಲ
ಬೆಂಗಳೂರು: ರಾಜ್ಯ ಸರಕಾರ ಹಾಗೂ ಕೆಪಿಸಿಸಿ ನಡುವೆ ವಾಕ್ ಸಮರಕ್ಕೆ ಕಾರಣವಾಗಿದ್ದ ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಕೊನೆಗೂ ಸಿಎಂ ಯಡಿಯೂರಪ್ಪ ಅವರು ಷರತ್ತುಬದ್ಧ ಅನುಮತಿ ನೀಡಿದ್ದಾರೆ. ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಈ ವಿಷಯ ಸ್ಪಷ್ಟಪಡಿಸಿದರು.
ಕೋವಿಡ್‌-19 ಮಾರ್ಗಸೂಚಿಯ ಪ್ರಕಾರ ಜೂನ್ 14ರಂದು ನಡೆಯಬೇಕಾಗಿದ್ದ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಮಾಡಲಾಗಿತ್ತು. ಸರ್ಕಾರದ ಈ ನಡೆಯನ್ನು ಕಾಂಗ್ರೆಸ್ ಖಂಡಿಸಿತ್ತು. ಇದೀಗ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಕಾರ್ಯಕ್ರಮ ನಡೆಸಲು ಅನುಮತಿ ನೀಡಿದ್ದಾರೆ. ಆದರೆ ಕೆಲವೊಂದು ಶರತ್ತುಗಳನ್ನು ಪಾಲನೆ ಮಾಡುವಂತೆ ಸೂಚನೆ ನೀಡಿದ್ದಾರೆ.
ಸಿಎಂ ಮಾತನಾಡುತ್ತಾ, ಡಿಕೆ ಶಿವಕುಮಾರ್ ಅವರು ಯಾವಾಗ ಬೇಕಾದರು ಪದಗ್ರಹಣ ಕಾರ್ಯಕ್ರಮ ಮಾಡಲಿ. ನಮ್ಮದೇನು ಅಭ್ಯಂತರವಿಲ್ಲ. ಈ ಕುರಿತಾಗಿ ಡಿಕೆಶಿ ಅವರಲ್ಲಿ ದೂರವಾಣಿ ಮೂಲಕ ಮಾತನಾಡಿದ್ದೇನೆ. ಕೊರೊನಾ ಸೋಂಕು ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಬಾರದು. ಈ ನಿಟ್ಟಿನಲ್ಲಿ ಎಲ್ಲಾ ಮುನ್ನೆಚ್ಚರಿಕೆಗಳನ್ನು ವಹಿಸುವುದಾಗಿ ಅವರು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಎರಡು ಬಾರಿ ಅನುಮತಿಯನ್ನು ನಿರಾಕರಣೆ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಜೂನ್ 14 ರಂದು ರಾಜ್ಯದ್ಯಂತ ಆನ್‌ಲೈನ್ ಮೂಲಕ ಕಾರ್ಯಕ್ರಮ ನಡೆಸಲು ಡಿಕೆಶಿ ಸಿದ್ದತೆ ಮಾಡಿಕೊಂಡಿದ್ದರು. ಆದರೆ ಸರ್ಕಾರ ಕೊನೆಯ ಗಳಿಗೆಯಲ್ಲಿ ಅನುಮತಿ ನಿರಾಕರಣೆ ಮಾಡಿತ್ತು. ಸರ್ಕಾರದ ನಡೆಯನ್ನು ರಾಜಕೀಯ ದುರುದ್ದೇಶದ ನಡೆ ಎಂದು ಕಾಂಗ್ರೆಸ್ ಖಂಡಿಸಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ ವರ್ಚುವಲ್ ರ್ಯಾಲಿಗೆ ಅನುಮತಿ ನೀಡೋದಾದರೆ ನಮಗೆ ಯಾಕಿಲ್ಲ ಎಂದು ಪ್ರಶ್ನಿಸಿತ್ತು. ಅಲ್ಲದೆ ಕಾನೂನು ಹೋರಾಟವನ್ನು ನಡೆಸುವ ಎಚ್ಚರಿಕೆಯನ್ನು ನೀಡಿತ್ತು.
ಈ ವಿಚಾರ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಅನುಮತಿಯನ್ನು ನೀಡಿದ್ದಾರೆ. ಆದರೆ ನಿಗದಿತ ದಿನಾಂಕದಲ್ಲೇ ಕಾರ್ಯಕ್ರಮ ನಡೆಯುತ್ತಾ ಎನ್ನುವುದು ಇನ್ನೂ ಅಧಿಕೃತಗೊಂಡಿಲ್ಲ.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.