HomePage_Banner
HomePage_Banner
HomePage_Banner
HomePage_Banner

ಬಿಜೆಪಿ ಕರ್ನಾಟಕ ಜನ ಸಂವಾದ ರ್‍ಯಾಲಿ-ಶಾಸಕ ಮಠಂದೂರು ನೇತೃತ್ವದಲ್ಲಿ ಪುತ್ತೂರಿನಲ್ಲಿ ನೇರ ಪ್ರಸಾರ ವೀಕ್ಷಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಬಿಜೆಪಿ ಕಾರ್ಯಕರ್ತರು ಮತ್ತು ಜನರೊಂದಿಗೆ ಸಂವಾದ ನಡೆಸುವ ನಿಟ್ಟಿನಲ್ಲಿ ಜೂ.14ರಂದು ಸಂಜೆ ಬಿಜೆಪಿ ಕರ್ನಾಟಕ ಜನ ಸಂವಾದ ರ್‍ಯಾಲಿ ನೇರ ಪ್ರಸಾರದ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಪುತ್ತೂರು ರೋಟರಿ ಟ್ರಸ್ಟ್ ಹಾಲ್‌ನಲ್ಲಿ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದ್ದು, ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಪುತ್ತೂರು ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಸಂವಾದದಲ್ಲಿ ಭಾಗವಹಿಸಿದ್ದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಕರ್ನಾಟಕ ಜನಸಂವಾದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ಮೋದಿ ಸರಕಾರದ 2 ನೇ ಅವಧಿಯ 1 ವರ್ಷದ ಸಾಧನೆ, ಕೊರೋನಾ ಸೋಂಕು ತಡೆಯುವ ಬಗ್ಗೆ ಸಂವಾದ ನಡೆಯಿತು.ಮುಖ್ಯಮಂತ್ರಿ ಯಡಿಯೂರಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಾದ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದರು.ಸಚಿವರಾದ ಡಿ.ವಿ.ಸದಾನಂದ ಗೌಡ, ನಿರ್ಮಲಾ ಸೀತಾರಾಮನ್ ಅವರು ಉಪಸ್ಥಿತರಿದ್ದರು. ಪುತ್ತೂರು ರೋಟರಿ ಟ್ರಸ್ಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದ ನೇರ ಪ್ರಸಾರದಲ್ಲಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಜಿಲ್ಲಾ ಉಪಾಧ್ಯಕ್ಷ ರಾಧಾಕೃಷ್ಣ ರೈ ಬೂಡಿಯಾರ್, ಜಿಲ್ಲಾ ಕಾರ್ಯದರ್ಶಿ ಜಯಂತಿ ನಾಯಕ್, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ಜಯಶ್ರೀ ಎಸ್ ಶೆಟ್ಟಿ, ಯುವ ಮೋರ್ಚಾ ನಗರ ಅಧ್ಯಕ್ಷ ಸಚಿನ್ ಶೆಣೈ, ತಾ.ಪಂ ಸದಸ್ಯರಾದ ದಿವ್ಯಾ ಪುರುಷೋತ್ತಮ, ಮುಕುಂದ ಗೌಡ ಬಜತ್ತೂರು, ನಗರಸಭಾ ಸದಸ್ಯರಾದ ಭಾಮಿ ಅಶೋಕ್ ಶೆಣೈ, ಶಿವರಾಮ್, ವಿದ್ಯಾ ಗೌರಿ, ಶ್ರೀಮತಿ ಶಶಿಕಲಾ ಸಿ.ಎಸ್, ಮಮತಾ ರಂಜನ್, ದೀಕ್ಷಾ ಪೈ, ಬಿಜೆಪಿ ನಗರ ಮಂಡಲದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ರಾಮದಾಸ್ ಹಾರಾಡಿ, ಸುರೇಶ್ ಅತ್ರಮಜಲು, ಅರ್ಪಣಾ, ಇಂದು ಶೇಖರ್, ಸಾಮಾಜಿಕ ಜಾಲತಾಣದ ಸಂದೀಪ್ ಲೋಬೋ, ಜೀವನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಂಕಲ್ಪ ಬೋಧನೆ:
ಕಾರ್ಯಕ್ರಮದ ಕೊನೆಯಲ್ಲಿ ಸಂಕಲ್ಪ ಬೋಧನೆ ನಡೆಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜ್ಯೋಶಿಯವರು ಇದನ್ನು ನಡೆಸಿಕೊಟ್ಟರು. ಸಂಕಲ್ಪ ಬೋಧನೆಯಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡುತ್ತಿದ್ದವರೆಲ್ಲರೂ ಕೈ ಮುಂದಕ್ಕೆ ಚಾಚಿ ಸಂಕಲ್ಪ ಸ್ವೀಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.