Home_Page_Advt
Home_Page_Advt
Home_Page_Advt

ಕರಾಯ: ಮಕ್ಕಳಿಂದಲೇ ತಂದೆಯ ಬರ್ಬರ ಕೊಲೆ !

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ ಮಕ್ಕಳಿಬ್ಬರು ತಂದೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಕರಾಯ ಗ್ರಾಮದ ಮುಗ್ಗದ ಆನೆಪಲ್ಲ ಎಂಬಲ್ಲಿ ಜೂ.14ರಂದು ಮಧ್ಯರಾತ್ರಿ ನಡೆದಿದೆ.

ಕರಾಯದ ಧರ್ನಪ್ಪ ಪೂಜಾರಿ (65) ಕೊಲೆಯಾದ ವ್ಯಕ್ತಿ. ಇವರನ್ನು ಮಕ್ಕಳಾದ ಮೋನಪ್ಪ ಹಾಗೂ ನವೀನ ಎಂಬವರು ಕತ್ತಿಯಿಂದ ಕಡಿದು ಕೊಲೆ ನಡೆಸಿದ್ದು, ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಧರ್ನಪ್ಪ ಪೂಜಾರಿಯವರು ತೆಂಗಿನ ಮರದಿಂದ ತೆಂಗಿನಕಾಯಿ,  ಸೀಯಾಳಗಳನ್ನು ತೆಗೆದು ಮಾರಾಟ ಮಾಡುತ್ತಿದ್ದು, ಇದೇ ವಿಚಾರಕ್ಕೆ ಆಗಾಗ ಪತ್ನಿ, ಮಕ್ಕಳು ಇವರಲ್ಲಿ ಜಗಳ ಮಾಡುತ್ತಿದ್ದರು. ಆದಿತ್ಯವಾರ ಮಧ್ಯರಾತ್ರಿಯೂ ಇದೇ ವಿಚಾರಕ್ಕೆ ತಂದೆ ಮಕ್ಕಳೊಳಗೆ ಜಗಳವಾಗಿದ್ದು, ಈ ಸಂದರ್ಭ ತಂದೆಗೆ ಮಕ್ಕಳು ಕತ್ತಿಯಿಂದ ಕಡಿದಿದ್ದಾರೆ. ಹಲ್ಲೆಗೊಳಗಾದ ಧರ್ನಪ್ಪ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯತ್ತಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.