Home_Page_Advt
Home_Page_Advt
Home_Page_Advt

ನಗರಸಭೆ ವ್ಯಾಪ್ತಿಯಲ್ಲಿ 15 ದಿನದೊಳಗೆ ಹೂಳೆತ್ತುವ ಕಾಮಗಾರಿ ಪೂರ್ಣ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಕೆಲವು ಕಡೆಗಳಲ್ಲಿ ಕೃತಕ ನೆರೆಯ ಹಾವಳಿ ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜಕಾಲುವೆಗಳು ಮತ್ತು ಚರಂಡಿಗಳ ಹೂಳೆತ್ತುವ ಕಾಮಗಾರಿಗಳು ರೂ. 21ಲಕ್ಷ ವೆಚ್ಚದಲ್ಲಿ ಈಗಾಗಲೇ ವಾರ್ಡ್‌ಗಳಲ್ಲಿ ನಡೆಯುತ್ತಿದ್ದು ಇನ್ನು 15 ದಿನಗಳ ಒಳಗಾಗಿ ಚರಂಡಿಗಳ ಹೂಳೆತ್ತುವ ಕಾಮಗಾರಿಗಳು ಪೂರ್ಣಗೊಳ್ಳಲಿದೆ. ಈ ಕುರಿತು ಸಕಾಲದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ನಗರಸಭಾ ಪೌರಾಯುಕ್ತೆ ರೂಪಾ ಶೆಟ್ಟಿ ಸೂಚಿಸಿದ್ದಾರೆ.

ಮಳೆಗಾಲದಲ್ಲಿ ಕೃತಕ ಕೆಲವೊಂದು ಭಾಗದಲ್ಲಿ ಕೃತಕ ನೆರೆ ಹಾವಳಿ ತಪ್ಪಿಸುವ ಉದ್ದೇಶದಿಂದ ಈಗಾಗಲೇ ನಗರಸಭಾ ವ್ಯಾಪ್ತಿಯಲ್ಲಿ ಹರಿಯುತ್ತಿರುವ ರಾಜಕಾಲುವೆಗಳ ಹೂಳೆತ್ತಿಸುವ ಕಾಮಗಾರಿಯು ಪೂರ್ಣಗೊಂಡಿದೆ. ಮುಂದೆ ವಾರ್ಡ್ ವಿಭಾಗದಲ್ಲಿ ಚರಂಡಿಗಳ ಹೂಳೆತ್ತಿಸುವ ಕಾಮಗಾರಿಗಳು ನಡೆಯುತ್ತಿದೆ. ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಾಮಗಾರಿಗಳ ಆರಂಭಕ್ಕೆ ವಿಳಂಬವಾಗಿತ್ತು. ಇದೀಗ ಎಲ್ಲಾ ವಾರ್ಡ್‌ಗಳಲ್ಲಿ ಕಾಮಗಾರಿಗಳು ಭರದಿಂದ ಸಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸಿ.ಸಿ.ಕ್ಯಾಮರ ಅಳವಡಿಕೆ:
ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ರಸ್ತೆ ಬದಿ ತ್ಯಾಜ್ಯ ಸುರಿಯುವ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿರುವ ಪ್ರದೇಶಕ್ಕೆ ಸಂಬಂಧಿಸಿ ಪ್ರಮುಖ 8 ಕಡೆಗಳಲ್ಲಿ ಪುತ್ತೂರು ನಗರಸಭೆಯ ವತಿಯಿಂದ ಸಿ.ಸಿ. ಕೆಮರಾಗಳನ್ನು ಅಳವಡಿಸುವ ಕಾರ್ಯ ಆಗಿದೆ. ಸಿ.ಸಿ. ಕೆಮರಾ ಅಳವಡಿಸುವ ಮೂಲಕ ತ್ಯಾಜ್ಯ ಸುರಿಯುವವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಕ್ಯಾಮರ ಪೂಟೇಜ್‌ನಲ್ಲಿ ಕಸ ಬಿಸಾಡುವವರನ್ನು ಪತ್ತೆ ಮಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಯುಕ್ತೆ ರೂಪಾ ಶೆಟ್ಟಿ ತಿಳಿಸಿದ್ದಾರೆ.

ಕೃತಕ ನೆರೆ ಮತ್ತು ಮಳೆ ನೀರಿನಿಂದ ಯಾರಿಗೂ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ. ಎಲ್ಲೆಲ್ಲಾ ನೆರೆ ಭೀತಿ ಇದೆಯೋ ಅಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ನಗರಸಭೆಗೆ ಸೂಚನೆ ನೀಡಲಾಗಿದೆ –ಸಂಜೀವ ಮಠಂದೂರು, ಶಾಸಕರು ಪುತ್ತೂರು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.