Home_Page_Advt
Home_Page_Advt
Home_Page_Advt

ಹಿರೇಬಂಡಾಡಿಯ ಯುವಕನಿಗೆ ಕೋವಿಡ್-19 ದೃಢ | ಅಧಿಕಾರಿ ತಂಡ ಭೇಟಿ, 3 ಮನೆ ಸೀಲ್‌ಡೌನ್ ಸಾಧ್ಯತೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಕೊಳ್ಳೇಜಾಲ್ ನಿವಾಸಿ ಯುವಕನೋರ್ವನಿಗೆ ಕೋವಿಡ್-೧೯ ದೃಢವಾಗಿದ್ದು, ಕಂದಾಯ ಇಲಾಖೆ, ಪೊಲೀಸ್, ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಯುವಕನ ಮನೆ ಮತ್ತು ಇತರ ೨ ಪ್ರಾಥಮಿಕ ಸಂಪರ್ಕ ಹೊಂದಿರುವ ಮನೆ ಸೇರಿದಂತೆ ೩ ಮನೆ ಶೀಲ್‌ಡೌನ್ ಮಾಡುವ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿರುವುದಾಗಿ ತಿಳಿದು ಬಂದಿದೆ.

ಕೊಳ್ಳೇಜಾಲ್ ನಿವಾಸಿ ೨೪ ವರ್ಷ ಪ್ರಾಯದ ಯುವಕನಿಗೆ ೧೫ ದಿನಗಳ ಹಿಂದೆ ಮೆದುಳು ಜ್ವರ ಕಾಣಿಸಿಕೊಂಡಿತ್ತು. ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಬಂದಿದ್ದರೆನ್ನಲಾಗಿದ್ದು, ಮತ್ತೆ ೫ ದಿನಗಳ ಹಿಂದೆ ಮತ್ತೆ ಜ್ವರ ಕಾಣಿಸಿಕೊಂಡು, ಪುತ್ತೂರು ಆಸ್ಪತ್ರೆಗೆ ತೆರಳಿ ಅಲ್ಲಿಂದ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಅಲ್ಲಿ ಗಂಟಲು ದ್ರವದ ಮಾದರಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದೀಗ ಪೊಸಿಟಿವ್ ವರದಿ ಬಂದಿದ್ದು, ಯುವಕನಿಗೆ ಕೋವಿಡ್-೧೯ ದೃಢವಾಗಿರುವುದಾಗಿ ವರದಿಯಾಗಿದೆ.

ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಜೀನ, ಉಪ್ಪಿನಂಗಡಿ ಕಂದಾಯ ನಿರೀಕ್ಷಕ ವಿಜಯವಿಕ್ರಂ, ಹಿರೇಬಂಡಾಡಿ ಗ್ರಾಮಕರಣಿಕ ರಮಾನಂದ ಚಕ್ಕಡಿ, ಹಿರೇಬಂಡಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೌಕತ್ ಆಲಿ, ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಯುವಕನ ಮನೆಯವರಿಗೆ ಮತ್ತು ಪ್ರಾಥಮಿಕ ಸಂಪರ್ಕ ಹೊಂದಿದ್ದ ೨ ಮನೆಯವರಿಗೆ ಅಗತ್ಯ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.