ಜೂ.18ರಂದು ದ್ವಿತೀಯ ಪಿಯುಸಿ ಪರೀಕ್ಷೆ | ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಉಚಿತ ಪ್ರಯಾಣ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಜೂ.18ರಂದು ನಡೆಯಲಿರುವ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ನಿಗಮದ ಸಾರಿಗೆ ಸೌಲಭ್ಯ ಉಚಿತವಾಗಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.


ಕೆ.ಎಸ್.ಆರ್.ಟಿ.ಸಿ. ಬಸ್‌ಗಳು ಕಾರ್ಯಾಚರಣೆಯಾಗುತ್ತಿರುವ ಮಾರ್ಗದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣವಾಗಿದ್ದು, ಮುಂದುವರೆದಂತೆ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನಿಗದಿತ ಪರೀಕ್ಷಾ ಕೇಂದ್ರ ತಲುಪಲು ಅನುಕೂಲವಾಗುವ ನಿಟ್ಟಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನೀಡಲಾದ ಮಾರ್ಗದಲ್ಲಿ ನಿಗಮದ ಸಾರಿಗೆ ಸೌಲಭ್ಯ ಕಲ್ಪಿಸಲಾಗುವುದು. ಶಿಕ್ಷಣ ಇಲಾಖೆಯಿಂದ ನಿಯೋಜಿಸಲಾದ ನೋಡೆಲ್ ಅಧಿಕಾರಿಗಳ ಮಾರ್ಗದರ್ಶನದಂತೆ ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಪರೀಕ್ಷಾ ಕೇಂದ್ರ ಪೂರ್ವಾಹ್ನದೊಳಗೆ ತಲುಪುವಂತೆ ಮತ್ತು ಪರೀಕ್ಷೆ ಮುಗಿದ ಬಳಿಕ ವಾಪಾಸ್ಸು ಹಿಂದಕ್ಕೆ ಕಾರ್ಯಾಚರಣೆ ಮಾಡಲು ನಿಗಮದ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ. ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ನಾಗೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.