Breaking News

ಜೂ.17: ದ.ಕ ಜಿಲ್ಲೆಯಲ್ಲಿ 8 ಕೊರೋನಾ ಪಾಸಿಟಿವ್

Puttur_Advt_NewsUnder_1
Puttur_Advt_NewsUnder_1

ದ.ಕ. ಜಿಲ್ಲೆಯಲ್ಲಿ ಜೂ.17ರಂದು 8 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇಂದಿನ ಹೆಲ್ತ್‌ ಬುಲೆಟಿನ್‌ನಲ್ಲಿ ದಕ್ಷಿಣ ಕನ್ನಡದಲ್ಲಿ 8 ಮಂದಿಗೆ ಕೊರೋನಾ ಪಾಸಿಟಿವ್‌ ಪ್ರಕರಣದ ಬಗ್ಗೆ ವರದಿಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 368ಕ್ಕೆ ಏರಿಕೆಯಾಗಿದೆ. ಇಬ್ಬರು ವಿದೇಶದಿಂದ ಬಂದವರಾಗಿದ್ದು, ಇನ್ನೋರ್ವ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 7734ಕ್ಕೆ ಏರಿಕೆಯಾಗಿದೆ. 

ಇನ್ನು ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದಾಗಿ 8 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಅನ್ಯ ಕಾರಣದಿಂದಾಗಿ ಸಾವನ್ನಪ್ಪಿದ 4 ಜನರನ್ನು ಸೇರಿಸಿ ಒಟ್ಟು 102 ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ಒಟ್ಟು 348 ಜನರು ಗುಣಮುಖರಾಗಿದ್ದು. ಈ ಮೂಲಕ ರಾಜ್ಯದಲ್ಲಿ ಗುಣಮುಖರಾದವರ ಸಂಖ್ಯೆ4804 ಕ್ಕೆ ಏರಿಕೆಯಾಗಿದೆ, 2824 ಆಕ್ಟಿವ್​ ಕೇಸ್​ ಇದೆ ಅಂತಾ ಆರೋಗ್ಯ ಇಲಾಖೆ ತಿಳಿಸಿದೆ. ಇನ್ನು ಈ 204 ಪ್ರಕರಣಗಳಲ್ಲಿ 106 ಅಂತಾರಾಜ್ಯ ಹಾಗೂ 02 ಅಂತಾರಾಷ್ಟ್ರೀಯ ಪ್ರಯಾಣಿಕರು ಇರೋದಾಗಿ ಮಾಹಿತಿ ಲಭ್ಯವಾಗಿದೆ.

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.