Home_Page_Advt
Home_Page_Advt
Home_Page_Advt

ಗ್ರಾಮೀಣ ಕೂಟ ಸಂಸ್ಥೆಯಿಂದ ಪೌರ ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್, ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರಿನ ಬನ್ನೂರಿನಲ್ಲಿ ಶಾಖಾ ಸಂಸ್ಥೆ ಹೊಂದಿರುವ ಗ್ರಾಮೀಣ ಕೂಟ ಸಂಸ್ಥೆಯಿಂದ ದರ್ಬೆಯಲ್ಲಿ ಜೂ. ೧೮ರಂದು ನಡೆದ ಮಾಸ್ಕ್ ದಿನ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್, ದಿನಬಳಕೆ ಕಿಟ್ ವಿತರಣೆ ಮಾಡಿದರು.

ಸಹಾಯಕ ಕಮೀಷನರ ಡಾ. ಯತೀಶ್ ಉಳ್ಳಾಲ್, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ತಹಶೀಲ್ದಾರ್ ರಮೇಶ್ ಬಾಬು ಅವರು ಪೌರ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಸಭಾ ಸದಸ್ಯರಾದ ಭಾಮಿ ಅಶೋಕ್ ಶೆಣೈ, ವಿದ್ಯಾ ಆರ್ ಗೌಡಿ, ಶೀನಪ್ಪ ನಾಯ್ಕ್, ಪದ್ಮನಾಭ ನಾಕ್, ಮಮತಾರಂಜನ್, ಯೂಸೂಫ್, ಶಶಿಕಲಾ ಸಿ.ಎಚ್, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ರೈ, ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿ, ಹಿರಿಯ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ, ಶ್ವೇತಾ ಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗ್ರಾಮೀಣ ಕೂಟ ಸಂಸ್ಥೆಯ ಶಾಖಾ ಮನೇಜರ್ ಪುನಿತ್, ಜಯಪ್ರಸಾದ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

ಸದಸ್ಯರಿಗೆ ಸಾಲ ಸೌಲಭ್ಯ ನೀಡುವ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲೂ ಜನರ ಆರೋಗ್ಯ ರಕ್ಷಣೆ ಮತ್ತು ಅವರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ಈಗಾಗಲೇ ಈ ಭಾರಿ ಕೊರೋನಾ ವೈರಸ್‌ನಲ್ಲಿ ತಮ್ಮ ಹಂಗನ್ನು ತೊರೆದು ಸಾರ್ವಜನಿಕರ ಆರೋಗ್ಯಕ್ಕಾಗಿ ಕಾರ್ಯ ನಡೆಸುತ್ತಿರುವ ಪೊಲೀಸ್, ವೈದ್ಯರು, ಪೌರ ಕಾರ್ಮಿಕರು ಸೇರಿದಂತೆ ಪತ್ರಿಕಾ ಮಾದ್ಯಮದವರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮಾಡಲಾಗಿದೆ. ಮಾಸ್ಕ್ ದಿನದ ಅಂಗವಾಗಿ ಪುತ್ತೂರು ನಗರಸಭೆ ಪೌರ ಕಾರ್ಮಿಕರಿಗೆ ಅಗತ್ಯ ದಿನಬಳಕೆ ೭೦ ಕಿಟ್‌ಗಳನ್ನು ವಿತರಣೆ ಮಾಡಲಾಗಿದೆ. ಜೊತೆಗೆ ನಗರಸಭೆ ಪೌರಕಾರ್ಮಿಕರು ಸೇರಿದಂತೆ ಅಧಿಕಾರಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಗಿದೆ – ನಟರಾಜ್, ವಲಯ ವ್ಯವಸ್ಥಾಪಕ ಗ್ರಾಮೀಣ ಕೂಟ ಸಂಸ್ಥೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.