Home_Page_Advt
Home_Page_Advt
Home_Page_Advt

ಮಾಜಿ ಸಚಿವ ಬಿ.ರಮಾನಾಥ ರೈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ | ಉಮೇಶ್ ಆಚಾರ್ಯ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು

Puttur_Advt_NewsUnder_1
Puttur_Advt_NewsUnder_1

ಬಂಟ್ವಾಳ : ಮಾಜಿ ಸಚಿವ ಬಿ.ರಮಾನಾಥ ರೈ ಅವರ ಬಗ್ಗೆ ಅವಹೇಳನ ಕಾರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಉಮೇಶ್ ಆಚಾರ್ಯ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಪುತ್ತೂರು ಸಾಮಾಜಿಕ ಜಾಲತಾಣದ ಉಸ್ತುವಾರಿಯಾಗಿರುವ ಜಗದೀಶ್ ಕಜೆ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ ವಿಧಾನಸಭೆಗೆ ಅಯ್ಕೆಯಾಗಿ ಕರ್ನಾಟಕ ಘನಸರ್ಕಾರದ ಗೃಹ, ಅರಣ್ಯ ,ಸಾರಿಗೆ ,ಬಂದರು ಮತ್ತು ಮೀನುಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿರುವ, ಧಾರ್ಮಿಕ, ಸಾಮಾಜಿಕ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನನ್ನು ತಾನು ಸಕ್ರಿಯವಾಗಿ ತೊಡಗಿಸಿಕೊಂಡು ಜನಮನ್ನಣೆ ಗಳಿಸಿರುವ ಬೆಳ್ಳಿಪ್ಪಾಡಿ ರಮಾನಾಥ ರೈ ಇವರನ್ನು ಅವಹೇಳನ ಕಾರಿಯಾಗಿ ನಿಂದಿಸಿ ಫೇಸ್ಬುಕ್ ನಲ್ಲಿ ಪೊಸ್ಟ್ ಹಾಕಿರುವ ಉಮೇಶ್ ಆರ್ಚಾರ್ಯ ಎಂಬವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆಸಿ ಅಶೋಕ್ ಶೆಟ್ಟಿಮತ್ತು ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಮಾಜಿ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಜತೆಗಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.