HomePage_Banner
HomePage_Banner
HomePage_Banner

ಚಿಕ್ಕಮಗಳೂರು ಜಿಲ್ಲೆ: ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1

ಚಿಕ್ಕಮಗಳೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 7 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 21 ಅಂಗನವಾಡಿ ಕಾರ್ಯಕರ್ತೆ ಮತ್ತು 83 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ:

ಅಂಗನವಾಡಿ ಕಾರ್ಯಕರ್ತೆ: ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಥಮ/ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜಶಾಸ್ತ್ರ / ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿದ್ದು, ಪ್ರಮಾಣ ಪತ್ರ / ಅಂಕಪಟ್ಟಿಯು ಗರಿಷ್ಠ 625, ಕನಿಷ್ಠ 219 ಅಂಕಗಳನ್ನು ಹೊಂದಿದ್ದಲ್ಲಿ, ಅಂತಹ ಅಭ್ಯರ್ಥಿಗಳನ್ನು ಪರಿಗಣಿಸತಕ್ಕದ್ದು.

ಅಂಗನವಾಡಿ ಸಹಾಯಕಿ: ಕನಿಷ್ಠ 4ನೇ ತರಗತಿ ತೇರ್ಗಡೆ, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಬೇಕು. 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ. ಒಂದೇ ವಿದ್ಯಾರ್ಹತೆಯುಳ್ಳ ಒಂದಕ್ಕಿಂತ ಹೆಚ್ಚು ಅರ್ಜಿ ಬಂದಿದ್ದಲ್ಲಿ ಹೆಚ್ಚು ಅಂಕ ಗಳಿಸಿದವರನ್ನು ಆಯ್ಕೆ ಮಾಡಬೇಕು.

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 18-35 ವರ್ಷ ವಯೋಮಿತಿಯೊಳಗಿರಬೇಕು.

ಸ್ಥಳೀಯತೆ: ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಆಯ್ಕೆಗೆ ಸ್ಥಳೀಯರಾಗಿರಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ಒಂದು (1) ವರ್ಷದೊಳಗೆ ಸಂಬಂಧಪಟ್ಟ ತಹಶೀಲ್ದಾರರಿಂದ / ಉಪ ತಹಶೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-07-2020

ಹೆಚ್ಚಿನ ವಿವರಗಳಿಗಾಗಿ ವೆಬ್‍ಸೈಟ್: www.anganwadirecruit.kar.nic.in

ಆನ್‍ಲೈನ್ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಸುದ್ದಿ ಆನ್‍ಲೈನ್ ವಿಭಾಗ, ದೇವಣ್ಣ ಕಿಣಿ ಬಿಲ್ಡಿಂಗ್, ಕಾರ್ಪೋರೇಶನ್ ಬ್ಯಾಂಕ್ ಬಳಿ, ಮುಖ್ಯರಸ್ತೆ ಪುತ್ತೂರು. ಫೋ: 08251-238949 | 7829503541

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.