Home_Page_Advt
Home_Page_Advt
Home_Page_Advt

ಬಲ್ನಾಡು ಗ್ರಾ.ಪಂ. ಸಭಾಭವನ, ಸೇವಾ ಕೇಂದ್ರ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1

ಬಲ್ನಾಡು ಗ್ರಾಮ ಪಂಚಾಯತ್ ವಠಾರದಲ್ಲಿ ಉದ್ಯೋಗ ಖಾತರಿ ಯೋಜನೆಯಲ್ಲಿ ರೂ.16.25ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಭಾರತ್ ನಿರ್ಮಾಣ್ ರಾಜೀವ ಗಾಂಧಿ ಸೇವಾ ಕೇಂದ್ರ ಮತ್ತು ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ರೂ. 16.50 ಲಕ್ಷ ಅನುದಾನದಲ್ಲಿ ನಿರ್ಮಿಸಲಾದ ಸಭಾಭವನ ಕಟ್ಟಡ ಉದ್ಘಾಟನೆ ಜೂ.20ರಂದು ನಡೆಯಿತು.


ಶಾಸಕ ಸಂಜೀವ ಮಠಂದೂರು ಅವರು ಎರಡೂ ಕಟ್ಟಡಗಳನ್ನು ರಿಬ್ಬನ್ ಕತ್ತರಿಸಿ ಉದ್ಘಾಟಿಸಿ ಮಾತನಾಡಿದರು. ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ, ಜಿ.ಪಂ.ಸದಸ್ಯೆ ಶಯನಾ ಜಯಾನಂದ, ತಾ.ಪಂ.ಸದಸ್ಯೆ ದಿವ್ಯ ಪುರುಷೋತ್ತಮ, ಕ್ಯಾಂಪ್ಕೋ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಬಲ್ನಾಡು ಗ್ರಾ.ಪಂ. ಉಪಾಧ್ಯಕ್ಷೆ ನಳಿನಿ ಕಲ್ಲಾಜೆ ಮತ್ತು ಸದಸ್ಯರು, ಅಭಿವೃದ್ಧಿ ಅಧಿಕಾರಿ ಶೆರೀಫ್ ಅಡ್ಯನಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ.ಅಧ್ಯಕ್ಷೆ ವಿನಯ ವಸಂತ್ ಸ್ವಾಗತಿಸಿದರು. ಸದಸ್ಯ ಎ.ಎಂ. ಪ್ರವೀಣಚಂದ್ರ ಆಳ್ವ ಮುಂಡೇಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಲ್ನಾಡು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಚಂದಪ್ಪ ಪೂಜಾರಿ ಕಾಡ್ಲ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.