HomePage_Banner
HomePage_Banner
HomePage_Banner
HomePage_Banner

ನೆಲ್ಯಾಡಿ ಗ್ರಾ.ಪಂ.: ರೋಜ್‌ಗಾರ್ ದಿವಸ ಆಚರಣೆ

Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತ್‌ನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ರೋಜ್‌ಗಾರ್ ದಿನಾಚರಣೆ ಜೂ.೨೦ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.


ಪಿಡಿಒ ಮಂಜುಳ ಎನ್.,ರವರು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪ್ರಮುಖ ಅಂಶಗಳು, ಅರ್ಹತೆಗಳು, ಕಾರ್ಯವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆಯಡಿ ಕೈಗೊಳ್ಳಬಹುದಾದ ವೈಯಕ್ತಿಕ ಕಾಮಗಾರಿಗಳು, ಸಮುದಾಯ ಆಧಾರಿತ ಕಾರ್ಯಕ್ರಮಗಳ ಬಗ್ಗೆಯೂ ಅವರು ಮಾಹಿತಿ ನೀಡಿದರು. ಗ್ರಾ.ಪಂ.ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಉಮಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸದಸ್ಯರುಗಳಾದ ಜಯಾನಂದ ಬಂಟ್ರಿಯಾಲ್, ಅಬ್ರಹಾಂ ಕೆ.ಪಿ., ಅಬ್ದುಲ್ ಹಮೀದ್,ಶಬ್ಬೀರ್ ಸಾಹೇಬ್, ಉಷಾ ಜೋಯಿ, ತೀರ್ಥೇಶ್ವರ ಉರ್ಮಾನು, ವಿನೋದರ, ಉಮಾವತಿ ದರ್ಖಾಸು, ಮೋಹಿನಿ, ಚಿತ್ರಾ ರಾಮನಗರ, ಫ್ಲೋರಿನಾ ಡಿ.ಸೋಜ ಹಾಗೂ ಉದ್ಯೋಗ ಖಾತರಿ ಯೋಜನೆಯ ಫಲಾನುಭವಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ದೇವರಾಜ್ ಸ್ವಾಗತಿಸಿ, ಸಿಬ್ಬಂದಿ ಶಿವಪ್ರಸಾದ್ ವಂದಿಸಿದರು. ಸಿಬ್ಬಂದಿಗಳಾದ ಭವ್ಯ, ಲಲಿತಾ, ಸೋಮಶೇಖರ, ಗಿರೀಶ್, ಲೀಲಾವತಿ, ಅಬ್ದುಲ್ ರಹಿಮಾನ್‌ರವರು ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.