HomePage_Banner
HomePage_Banner
HomePage_Banner

ಕೆಪಿಸಿಸಿ ಕಿಸಾನ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್‌ಕುಮಾರ್ ಬಾನಡ್ಕ ನೇಮಕ

Puttur_Advt_NewsUnder_1
Puttur_Advt_NewsUnder_1

ಕಡಬ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಿಸಾನ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಯತೀಶ್ ಕುಮಾರ್ ಬಾನಡ್ಕರವರು ನೇಮಕಗೊಂಡಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರಾಗಿರುವ ಯತೀಶ್‌ಕುಮಾರ್‌ರವರು ಕರ್ನಾಟಕ ಸರಕಾರ ಅರೆಭಾಷೆ ಅಕಾಡೆಮಿಯ ಮಾಜಿ ಸದಸ್ಯರೂ ಆಗಿದ್ದಾರೆ. ಪ್ರಸ್ತುತ ರಾಮಕುಂಜ ಗ್ರಾ.ಪಂ.ಸದಸ್ಯರಾಗಿರುವ ಇವರು ಆಲಂಕಾರು ವಲಯ ಕಾಂಗ್ರೆಸ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಕೈಕುರೆ, ಕೆಪಿಸಿಸಿ ಸದಸ್ಯ ಡಾ.ಬಿ.ರಘುರವರ ಶಿಪಾರಸ್ಸಿನ ಮೇರೆಗೆ ಕಿಸಾನ್ ಕಾಂಗ್ರೆಸ್‌ನ ರಾಜ್ಯ ಅಧ್ಯಕ್ಷ ಸಚಿನ್ ಮೀಗಾರವರು ಈ ನೇಮಕ ಮಾಡಿ ಆದೇಶಿಸಿದ್ದಾರೆ. ಯತೀಶ್ ಕುಮಾರ್ ಬಾನಡ್ಕರವರು ಪ್ರಸ್ತುತ ಚಿಕ್ಕಮಗಳೂರು ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿಯ ಉಸ್ತುವಾರಿಯನ್ನಾಗಿಯೂ ನೇಮಕ ಮಾಡಲಾಗಿದೆ. ಇವರು ರಾಮಕುಂಜ ಗ್ರಾಮದ ಸಂಪ್ಯಾಡಿ, ನಿವೃತ್ತ ಶಿಕ್ಷಕ ದಿ.ಮೋನಪ್ಪ ಗೌಡ ಹಾಗೂ ಗಿರಿಜಾ ದಂಪತಿ ಪುತ್ರ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.