ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಮಾಲೋಚನಾ ಸಭೆ | ಜೀರ್ಣೋದ್ಧಾರ ಕಾರ್ಯಗಳನ್ನು‌ ಪೂರ್ಣಗೊಳಿಸಲು ನಿರ್ಧಾರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಭಕ್ತರ ಸಮಾಲೋಚನಾ ಸಭೆ ಜೂ.21ರಂದು ನಡೆಯಿತು. ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈಯವರು ಅಧ್ಯಕ್ಷತೆ ವಹಿಸಿದ್ದರು.

ಕಳೆದ ಎಪ್ರಿಲ್ ತಿಂಗಳಿನಲ್ಲಿ ನಡೆಯ ಬೇಕಾಗಿದ್ದ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಹಾಮಾರಿ ಕೊರೊನದಿಂದಾಗಿ ಮುಂದೂಡಲ್ಪಟ್ಟಿರುವುದರಿಂದ ಬ್ರಹ್ಮಕಲಶೋತ್ಸವವನ್ನು ಮುಂದಿನ ದಿನಗಳಲ್ಲಿ ಹೇಗೆ ನಡೆಸಬಹುದು, ಯಾವಾಗ ನಡೆಸಬಹುದು ಎಂಬಿತ್ಯಾದಿ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ದೇವಸ್ಥಾನದಲ್ಲಿ ನಡೆಯುತ್ತಿರುವ ಜೀರ್ಣೋದ್ಧಾರ ಕಾರ್ಯಗಳನ್ನು ಶೀಘ್ರವಾಗಿ ಮುಕ್ತಾಯಗೊಳಿಸಿ ಬ್ರಹ್ಮಕಲಶೋತ್ಸವ ನಡೆಸಲು ಸಿದ್ಧರಾಗಿರಲು ನಿರ್ಣಯಿಸಲಾಯಿತಲ್ಲದೆ ಆರ್ಥಿಕ ಕ್ರೋಡೀಕರಣದ ಕುರಿತು ಚರ್ಚಿಸಲಾಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಜಯಾನಂದ, ಸಂಚಾಲಕ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕೋಶಾಧಿಕಾರಿ ನಿರಂಜನ ರೈ ಮಠಂತಬೆಟ್ಟು ಸಹಿತ ಹಲವರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.