ಕೆಯ್ಯೂರು: ನೆಟ್ಟಣಿಗೆ ಮುಡ್ನೂರು ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಯೋಗ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನೆಟ್ಟಣಿಗೆಮುಡ್ನೂರ್ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಕೆಯ್ಯೂರು ಅಂಬೇಡ್ಕರ ಭವನದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ಗುರು ವಿಶ್ವೇಶ್ವರ ಭಟ್ ಕೆಯ್ಯೂರು ಇವರು ಕಾರ್ಯಕ್ರಮ ನಡೆಸಿಕೊಟ್ಟರು. ಸೂರ್ಯ ನಮಸ್ಕಾರ ಹಾಗೂ ಇತರ ಯೋಗಾಸನಗಳನ್ನು ಮಾಡಲಾಯಿತು. ಯೋಗದಿಂದಾಗಿ ಮನುಷ್ಯನು ತನ್ನ ಶರೀರದಲ್ಲಿ ರೋಗ ನಿರೋಧಕ ಶಕ್ತಿಯನ್ನು ಯಾವ ರೀತಿ ಬೆಳೆಸಬಹುದು ಎಂಬುವುದನ್ನು ಸೂಚ್ಯವಾಗಿ ತಿಳಿಸಿದರು.

ಕೆಯ್ಯೂರು ಅಂಬೇಡ್ಕರ್ ಭವನದಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು. 

ಕಾರ್ಯಕ್ರಮದ ಕೊನೆಗೆ ವಿಶ್ವೇಶ್ವರ ಭಟ್ ಇವರನ್ನು ಮಹಾಶಕ್ತಿ ಕೇಂದ್ರದ ವತಿಯಿಂದ ಸನ್ಮಾನಿಸಲಾಯಿತು. ನೆಟ್ಟಣಿಗೆ ಮುಡ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಜಯಕುಮಾರ ಕುಮಾರ ರೈ ಕೊರಂಗ ಸ್ವಾಗತಿಸಿದರು, ಕೆಯ್ಯೂರು ಕೆದಂಬಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಶಿಧರ ರಾವ್, ತಾಲೂಕು ಪಂಚಾಯತ್ ಸದಸ್ಯೆ ಭವಾನಿ ಚಿದಾನಂದ, ತಾಲೂಕು ಯುವ ಮೋರ್ಚಾ ಕಾರ್ಯದರ್ಶಿ ರತನ್ ರೈ, ಕೆಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಬು ಬಿ, ಮಂಡಲ ಸಮಿತಿ ಕಾರ್ಯದರ್ಶಿ ಯತಿಂದ್ರ ಕೊಚ್ಚಿ, ಸತೀಶ್ ಸಾಂಬಾರು, ನಾರಾಯಣ ಪೂಜಾರಿ ಕುರಿಕ್ಕಾರ, ದೀಪಕ್ ಮಂಡ್ಯ ,ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಕೆಯ್ಯೂರು ಶಕ್ತಿ ಕೇಂದ್ರದ ಪ್ರಮುಖ್ ಪ್ರಕಾಶ್ ಆಳ್ವ, ಶರತ್ ಕುಮಾರ್ ಮಾಡಾವು, ಪ್ರದೀಪ್ ಕೆಯ್ಯೂರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.