ಪುತ್ತೂರು: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಪಡದೆ ನಡೆಸಲು ತಾಲೂಕಿನ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ನಡೆಸಲಾಗುವುದು ಎಂದು ಪುತ್ತೂರು ತಹಸೀಲ್ದಾರ್ ರಮೇಶ್ ಬಾಬು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್ ಸಿ ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ , ಪೋಷಕರಿಗೆ , ಅಧಿಕಾರಿಗಳಿಗೆ/ ಸಿಬ್ಬಂದಿಗಳಿಗೆ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ಪೋಷಕರಿಗೆ ಕರಪತ್ರ, ವಿದ್ಯಾರ್ಥಿಗಳಿಗೆ ಕರಪತ್ರ, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪೋಸ್ಟರ್ ಗಳನ್ನು ವಿತರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸ್ಯಾನಿಟೈಸ್:
ನಗರ ಸಭೆಯ ವ್ಯಾಪ್ತಿಗೆ ಬರುವ 4 ಪರಿಕ್ಷಾ ಕೇಂದ್ರಗಳಿಗೆ ನಗರ ಸಭೆಯ ವತಿಯಿಂದ, 8 ಗ್ರಾಮಾಂತರ ಪರೀಕ್ಷಾ ಕೇಂದ್ರಗಳಿಗೆ ಗ್ರಾಮ ಪಂಚಾಯತ್ ವತಿಯಿಂದ ಪ್ರತೀ ಪರೀಕ್ಷಾ ದಿನಗಳಂದು ಮತ್ತು ಪರಿಕ್ಷಾ ನಡೆದ ನಂತರ ಸ್ಯಾನಿಟೈಸ್ ಮಾಡಲಾಗುವುದು.
ಮಾಸ್ಕ್, ಸ್ಯಾನಿಟೈಸರ್ ನೀಡಿಕೆ:
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಸಂಬಂಧ ಪ್ರತೀ ವಿದ್ಯಾರ್ಥಿಗಳಿಗೆ ಶಾಸಕರ ವತಿಯಿಂದ, ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ, ಜಿ ಶಂಕರ ಟ್ರಸ್ಟ್ ಉಡುಪಿ ವತಿಯಿಂದ ಮುಖಗವಸು ಮತ್ತು ಕೇಂದ್ರವಾರು EMBASSY GROUP ಸಂಸ್ಥೆಯಿಂದ ಹ್ಯಾಂಡ್ ಸ್ಯಾನಿಟೈಸರ್ ಒದಗಿಸಲಾಗುವುದು.
ಉಷ್ಣಾಂಶ ಪರೀಕ್ಷೆ:
ಆರೋಗ್ಯ ಇಲಾಖೆಯಿಂದ ಮತ್ತು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ Digital Thermal Scanner ಗಳ ಮೂಲಕ ವಿದ್ಯಾರ್ಥಿಗಳ ದೇಹದ ಉಷ್ಣಾಂಶ ಪರೀಕ್ಷೆ ಮಾಡಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಪ್ರತೀ ಕೇಂದ್ರಕ್ಕೆ 2 ಸ್ವಯಂ ಸೇವಕರುಗಳನ್ನು ನಿಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Please cancel the sslc exams