HomePage_Banner
HomePage_Banner
HomePage_Banner
HomePage_Banner

ಕಿಸಾನ್ ಸಮ್ಮಾನ್ ಬಾಕಿ ಹಣವನ್ನು ರೈತರ ಖಾತೆಗೆ ಹಾಕದೆ ಮಾತು ತಪ್ಪಿದ ಸರಕಾರ | ಪುತ್ತೂರು ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಪಿ. ಮುರಳಿಧರ ಕೆಮ್ಮಾರ ಆರೋಪ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೋನಾ ಲಾಕ್‌ಡೌನ್ ಸಮಯದಲ್ಲಿ ಘೋಷಿಸಿದ ಕಿಸಾನ್ ಸಮ್ಮಾನ್ ಯೋಜನೆಯ ಬಾಕಿ ಹಣವನ್ನು ರೈತರ ಖಾತೆಗೆ ಹಾಕದೆ ಮಾತು ತಪ್ಪಿದ್ದಾರೆ ಎಂದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಪಿ.ಮುರಳಿಧರ ಕೆಮ್ಮಾರ ಆರೋಪಿಸಿದ್ದಾರೆ.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮೊದಲೇ ರೈತರು ಕೇಂದ್ರ ಮತ್ತು ರಾಜ್ಯ ಸರಕಾರಗಳ ರೈತ ವಿರೋಧಿ ನೀತಿಗಳಿಂದ ಬೇಸತ್ತು ಹೋಗಿದ್ದಾರೆ. ಈ ನಡುವೆ ಕಿಸಾನ್ ಸಮ್ಮಾನ್ ಯೋಜನೆ ಹಣವನ್ನು ರೈತರ ಖಾತೆಗೆ ಸರಿಯಾಗಿ ಪಾವತಿ ಮಾಡುತ್ತಿಲ್ಲ. ಜೊತೆಗೆ ಖಾಸಗಿ ವಿಮಾ ಸಂಸ್ಥೆಗಳ ಹಿಡಿತದಲ್ಲಿರುವ ಪ್ರಧಾನ ಮಂತ್ರಿ ಕಿಸಾನ್ ಭೀಮ್ ಯೋಜನೆಯು ಸಮರ್ಪಕವಗಿ ರೈತರಿಗೆ ಸಿಗುತ್ತಿಲ್ಲ ಎಂದು ಹೇಳಿದರು.

ಭೂಸುಧಾರಣೆ ಕಾಯ್ದೆ ತಿದ್ದುಪಡಿ ಹಿಂಪಡೆಯಬೇಕು:
ರಾಜ್ಯ ಸರಕಾರ ಇತ್ತೀಚೆಗೆ ಜಾರಿಗೆ ತಂದ ಕರ್ನಾಟಕ ಭೂಸುಧಾರಣೆ ಕಾಯ್ದೆ ೧೯೬೩ ತಿದ್ದುಪಡಿ ತಂದು ರೈತರ ಭೂಮಿಯನ್ನು ಬೃಹತ್ ಬಂಡವಾಳಶಾಹಿ ಮತ್ತು ರಿಯಲ್ ಎಸ್ಟೇಟ್ ಮಾಫಿಯಗಳ ಕೈಗೊಪ್ಪಿಸುವ ಷಡ್ಯಂತ್ರ ನಡೆಸುತ್ತಿದೆ. ಇದರಿಂದ ರೈತರ ಕೃಷಿ ಭೂಮಿ ಬಂಡವಾಳಶಾಹಿಗಳ ಪಾಲಾಗುತ್ತದೆ. ಆದ್ದರಿಂದ ಈ ಕಾಯ್ದೆಯನ್ನು ತಕ್ಷಣ ಹಿಂಪಡೆಯಬೇಕೆಂದು ಎಸ್.ಪಿ.ಮುರಳೀಧರ ಕೆಮ್ಮಾರ ಆಗ್ರಹಿಸಿದರು. ಪ್ರಾಕೃತಿಕ ವಿಕೋಪಗಳಿಂದ ಶೇ.೩೩ರಷ್ಟು ಬೆಳೆ ನಾಶವಾದರೆ ಮಾತ್ರ ಪರಿಹಾರ ಎಂಬ ಸರಕಾರದ ಆದೇಶವನ್ನು ಹಿಂಪಡೆದು ಕನಿಷ್ಠ ಬೆಳೆ ನಾಶಕ್ಕೂ ಪರಿಹಾರ ನೀಡಬೇಕು, ರೈತರ ಸಾಲಮನ್ನಾ ಯೋಜನೆಯು ಒಂದು ವರ್ಷವಾದರೂ ಇನ್ನೂ ಸಮರ್ಪಕವಾಗಿ ಎಲ್ಲಾ ರೈತರಿಗೆ ಕೈಸೇರಿಲ್ಲ ಎಂದು ಅವರು ಹೇಳಿದರಲ್ಲದೆ ಮುಂದಿನ ದಿನಗಳಲ್ಲಿ ಸರಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಕಿಸಾನ್ ಕಾಂಗ್ರೆಸ್ ಸಮಿತಿ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ನೇಮಕ
ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಏ.ಕೆ.ಜಯರಾಮ ರೈ ಅವರ ಶಿಫಾರಸ್ಸಿನಂತೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷನನ್ನಾಗಿ ಎಸ್.ಪಿ.ಮುರಳಿಧರ ಕೆಮ್ಮಾರ, ಪ್ರಧಾನ ಕಾರ್ಯದರ್ಶಿಯನ್ನಾಗಿ ನವೀನ್ ರೈ ಚೆಲ್ಯಡ್ಕ, ಜೊತೆ ಕಾರ್ಯದರ್ಶಿಯಾಗಿ ಲಕ್ಷ್ಮಣ ನಾಯ್ಕ ನಿಡ್ಪಳ್ಳಿ, ಸದಸ್ಯರನ್ನಾಗಿ ವಿಕ್ರಮ್ ರೈ ಸಾಂತ್ಯ ಅವರನ್ನು ಆಯ್ಕೆ ಮಡಿದ್ದಾರೆ ಎಂದು ಮುರಳಿಧರ ಕೆಮ್ಮಾರ ಅವರು ಹೇಳಿದರು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.