ಎಸ್.ಎಸ್.ಎಲ್.ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ ವಿದ್ಯಾರ್ಥಿಗಳು

Puttur_Advt_NewsUnder_1
Puttur_Advt_NewsUnder_1
  • ತಾಲೂಕಿನಲ್ಲಿ ಪರೀಕ್ಷೆ ಬರೆಯುತ್ತಿರುವ  5007 ವಿದ್ಯಾರ್ಥಿಗಳು 
  • 103 ಪರೀಕ್ಷಾ‌ ಕೊಠಡಿಗಳು

ಪುತ್ತೂರು: ಕೊರೋನಾ ಲಾಕ್‌ಡೌನ್‌ನಿಂದಾಗಿ ಮುಂದೂಡಲ್ಪಟ್ಟ 2019-20ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಜೂ.25ರಿಂದ ನಡೆಯುತ್ತಿದ್ದು  ತಾಲೂಕಿನಲ್ಲಿ ಒಟ್ಟು5007 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಒಟ್ಟು 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. 

ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ತಾಲೂಕಿನ 12 ಪರೀಕ್ಷಾ ಕೇಂದ್ರಗಳ 103 ಪರೀಕ್ಷಾ ಕೊಠಡಿಗಳಲ್ಲಿ ಸ್ಯಾನಿಟೈಸ್ ಮಾಡಲಾಗಿದೆ.

ವಿವೇಕಾನಂದ ಆಂಗ್ಲ ಮಾಧ್ಯಮ
ವಿಕ್ಟರ್ಸ್‌

 

ಈಶ್ವರಮಂಗಲ ಗಜಾನನ ಆಂಗ್ಲ ಮಾಧ್ಯಮ

ಪರೀಕ್ಷೆ ಬರೆಯಲು ವಿದ್ಯಾರಶ್ಮಿ ಗೆ ಬರುತ್ತಿರುವ ವಿದ್ಯಾರ್ಥಿಗಳು

 

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರ ದ ಉದ್ಘಾಟನೆಯನ್ನು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈರವರು ಉದ್ಘಾಟನೆ ನೇರವೇರಿಸಿದರು. ವಿದ್ಯಾರಶ್ಮಿ ಸಂಸ್ಥೆಯ ಆಡಳಿತಾಧಿಕಾರಿ ಆಶ್ವಿನ್ ಶೆಟ್ಟಿ, ಪ್ರಾಂಶುಪಾಲ ಸೀತಾರಾಮ ಕೇವಳ, ಸವಣೂರು ವಿದ್ಯಾರಶ್ಮಿಪರೀಕ್ಷಾ ಕೇಂದ್ರದ ಅಧೀಕ್ಷಕ  ನಾರಾಯಣ, ಸವಣೂರು ಗ್ರಾ.ಪಂ.ಸದಸ್ಯ ರಫೀಕ್ ಎಂ.ಎ.ಸವಣೂರು, ಗ್ರಾ.ಪಂ.ಲೆಕ್ಕಸಹಾಯಕ ಮನ್ಮಥ ಮತ್ತಿತರರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.