Home_Page_Advt
Home_Page_Advt
Home_Page_Advt

ಬೆಟ್ಟಂಪಾಡಿ: ಸರಳವಾಗಿ ಗಣೇಶೋತ್ಸವ ನಡೆಸಲು ನಿರ್ಧಾರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಹಾಮಾರಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಬಾರಿಯ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಸರಳವಾಗಿ ನಡೆಸುವಂತೆ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನಿರ್ಧರಿಸಿದೆ. ಜೂ. 21 ರಂದು ಸಮಿತಿಯ ಗೌರವಾಧ್ಯಕ್ಷ ಮನಮೋಹನ್ ರೈ ಚೆಲ್ಯಡ್ಕರವರ  ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ಸಮಾಲೋಚನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಈಗಾಗಲೇ ಸರಕಾರ ಧಾರ್ಮಿಕ ಕಾರ್ಯಕ್ರಮಗಳಿಗೆ ನಿಷೇಧ ವಿಧಿಸಿದೆ. ಈ ನಿಟ್ಟಿನಲ್ಲಿ ಈ ರೀತಿಯ ಪ್ರಕ್ರಿಯೆ ಇನ್ನೂ ತಿಂಗಳುಗಟ್ಟಲೆ ಹೋಗಲಿರುವುದರಿಂದ ಪ್ರತೀ ಬಾರಿ ನಡೆಯುತ್ತಿದ್ದ ಸಾರ್ವಜನಿಕ ಗಣೇಶೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಅಸಾಧ್ಯವಾಗಬಹುದು. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿಯೂ ಸರಳವಾಗಿ ಮತ್ತು ಧಾರ್ಮಿಕ ಪ್ರಕ್ರಿಯೆಯೊಂದಿಗೆ ಮಾತ್ರ ಗಣೇಶೋತ್ಸವ ಆಚರಿಸುವುದೆಂದೂ, ವಿಜೃಂಭಣೆ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸದಿರಲು ಸರ್ವಾನುಮತದಿಂದ ನಿರ್ಧರಿಸಲಾಯಿತು. ಆದಾಗ್ಯೂ ಸರಕಾರದ ನಿಯಮಾನುಸಾರ ಧಾರ್ಮಿಕ ವಿಧಿವಿಧಾನಗಳನ್ನು ನಡೆಸುವುದೆಂದು ತೀರ್ಮಾನಿಸಲಾಯಿತು. ಸಮಿತಿಯ ಅಧ್ಯಕ್ಷ ನಾಗೇಶ್ ರೈ ಮೂರ್ಕಾಜೆ, ಕಾರ್ಯದರ್ಶಿ ರಮೇಶ್ ಗೌಡ ಬಳ್ಳಿತ್ತಡ್ಕ, ಕೋಶಾಧಿಕಾರಿ ಉದಯ ಕುಮಾರ್ ಸಹಕರಿಸಿದರು. ಸಮಿತಿಯ ಕಾರ್ಯಕರ್ತರು ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.